
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜುಗಳ) ಉಡುಪಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಎಸ್.ಎನ್. ವಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಉತ್ತಮ ಪ್ರದರ್ಶನದೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಕಾಲೇಜಿನ ವಿದ್ಯಾರ್ಥಿನಿಯರದ ಧೃವಿ, ವಿನ್ಯಾಸ ಹಾಗೂ ಮಾನ್ಯ ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.ಅದೇ ರೀತಿ ಕಾಲೇಜಿನ ವಿದ್ಯಾರ್ಥಿಗಳಾದ ವರುಣ್ ಹಾಗು ಗಗನ್ ಬೈಲೂರು ತಂಡವನ್ನು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸಿ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಉಪನ್ಯಾಸಕ ವರ್ಗದವರು, ತರಬೇತುದಾರರು, ಕಾಲೇಜಿನ ಹಳೆ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಕೋರಿರುತ್ತಾರೆ.































































































































