
ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಡಾಕ್ಟರ್ ಕೆ ವಿದ್ಯಾ ಕುಮಾರಿ ಅವರು ಜಿ. ಪಂ. ನ ಡಾ. ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ನಿವೇಶನ ಹಂಚಿಕೆ ಕುರಿತ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ಈ ವೇಳೆ ಜಿಲ್ಲೆಯ ನಿವೇಶನ ರಹಿತ ಅರ್ಹ ಫಲಾನುಭವಿಗಳಿಗೆ ಪ್ರಸ್ತುತ ಲಭ್ಯವಿರುವ ನಿವೇಶನಗಳ ಹಕ್ಕು ಪತ್ರವನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಜೊತೆ ಮಾತನಾಡಿ ಈ ವ್ಯಾಪ್ತಿಯಲ್ಲಿ ವಾಸವಿರುವ ವಸತಿ ಹಾಗೂ ನಿವೇಶನ ರಹಿತ ಫಲಾನುಭವಿಗಳ ಪಟ್ಟಿಯನ್ನು ಪರಿಶೀಲಿಸಿ ಅರ್ಹರನ್ನು ಗುರುತಿಸಿ ಈಗಾಗಲೇ ಲಭ್ಯವಿರುವ ನಿವೇಶನಗಳ ಹಕ್ಕು ಪತ್ರಗಳನ್ನು ವಿತರಿಸಬೇಕು ಎಂದು ಸೂಚಿಸಿದರು. ಬೇಡಿಕೆ ಇರುವ ಗ್ರಾಮಗಳಲ್ಲಿ ನಿವೇಶನ ವಿತರಿಸಲು ಅಗತ್ಯವಿರುವ ಜಮೀನು ಗುರುತಿಸುವ ಕಾರ್ಯವನ್ನು ತಹಶೀಲ್ದಾರರು ಮತ್ತು ಕಾರ್ಯನಿರ್ವಹಣ ಅಧಿಕಾರಿಗಳು ಮಾಡಬೇಕು ಎಂದು ಸಲಹೆ ನೀಡಿದರು













