
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ
ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ನೇತೃತ್ವದಲ್ಲಿ ಜುಲೈ 21ರಂದು ಆದಿತ್ಯವಾರ
ಮಧ್ಯಾಹ್ನ 12-00ಗಂಟೆಗೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಸಭಾಂಗಣದಲ್ಲಿ ಆಟಿಡೊಂಜಿ ದಿನ
ಕಾರ್ಯಕ್ರಮ ಜರಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷರಾದ ಬೀರೊಟ್ಟು ದಿನೇಶ್
ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ಶಿಕ್ಷಣ ಸಂಸ್ಥೆಯ ನಿವೃತ್ತ
ಅಧ್ಯಾಪಕರಾದ ಮುಂಡ್ಕೂರು ಸಾಯಿನಾಥ್ ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಮತ್ತು ಮಹಾರಾಷ್ಟ್ರ ಧರ್ಮಶ್ರೀ ರಿಲೀಫ್ ಫೌಂಡೇಶನ್‌ನ
ಸಂಸ್ಥಾಪಕರು, ಉದ್ಯಮಿಗಳಾದ ಬೈಂದೂರು ನಾಗರಾಜ್ ಆರ್. ಸುವರ್ಣ ಅವರಿಗೆ ಉದ್ಯಮ ರತ್ನ
ಪ್ರಶಸ್ತಿ ನೀಡಿ ಗೌರವಿಸಲಿದ್ದೇವೆ. ಕಾರ್ಯಕ್ರಮದಲ್ಲಿ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಗೌರವಾಧ್ಯಕ್ಷರಾದ ಕುಂಟಲಗುಂಡಿ ರಾಜು ಶೆಟ್ಟಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಕಾಸರಬೈಲು ಸುರೇಶ್ ಪೂಜಾರಿ ಅವರು ಭಾಗವಹಿಸಲಿದ್ದಾರೆ. 32ಕ್ಕೂ ಅಧಿಕ ಬಗೆಯ ಆಟಿ ತಿಂಗಳ ತಿನಸುಗಳೊಂದಿಗೆ
ತುಳುನಾಡಿನ ಆಚಾರ ವಿಚಾರ ಹಾಗೂ ವೈಶಿಷ್ಟ್ಯತೆಯನ್ನು ನೆನಪಿಸುವ ಕಾರ್ಯಕ್ರಮವಾಗಿ ಮೂಡಿಸಬರಲಿದೆ. ಮಧ್ಯಾಹ್ನ 01-30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ
ಎಂದು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ
ಕಾರ್ಯದರ್ಶಿ ವೀಣಾ ಹರೀಶ್ ಪೂಜಾರಿ ಹಾಗೂ ಕಾರ್ಯಕ್ರಮದ ನಿರ್ದೇಶಕಿ ಹರಿಣಿ ಸುಂದರ
ಪೂಜಾರಿ ಅವರು ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.






