
ಖ್ಯಾತ ಪರಿಸರ ಕಾರ್ಯಕರ್ತೆ ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸಿದ, ಬೆಂಗಳೂರು ಹಾಸನ ಹೆದ್ದಾರಿಯಲ್ಲಿ ಸಾಲುಮರಗಳನ್ನು ನೆಟ್ಟು ಸಾಲುಮರದ ತಿಮ್ಮಕ್ಕನೆಂದೇ ಖ್ಯಾತರಾದ ಸಾಲುಮರದ ತಿಮ್ಮಕ್ಕನವರು ನಿನ್ನೆ ದಿವಂಗತರಾದರು. ಆ ಪ್ರಯುಕ್ತ ಇಂದು ಜೇಸಿ ಮಾಧ್ಯಮ ಶಾಲೆಯಲ್ಲಿ ಆಡಳಿತ ವರ್ಗ, ಶಿಕ್ಷಕ ವೃಂದ, ವಿದ್ಯಾರ್ಥಿಗಳೆಲ್ಲರೂ ಸೇರಿ ಶ್ರದ್ಧಾಂಜಲಿ ಅರ್ಪಿಸಿದರು. ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕನವರ ಯಶೋಗಾಥೆಯನ್ನು ವಿವರಿಸಲಾಯಿತು.
ವೇದಿಕೆಯಲ್ಲಿ ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿಯವರು, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಶ್ರದ್ಧಾಂಜಲಿ ಅರ್ಪಿಸಿದರು.






