ಭಾರತ್ ಸ್ಕೌಟ್ & ಗೈಡ್ಸ್ ಸ್ಪರ್ಧೆಯಲ್ಲಿ,ಜಿಲ್ಲಾಮಟ್ಟದಲ್ಲಿ ಪ್ರಥಮ

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ
ಭಾರತ್ ಸ್ಕೌಟ್ ಮತ್ತು ಗೈಡ್ಸ್, ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ಜೇಸೀ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಬನ್ನಿಸ್ ತಂಡದ ಮಕ್ಕಳು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.
ಬುಲ್ ಬುಲ್ ತಂಡದ ಮಕ್ಕಳು ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿ ಯವರು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.













