ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ, ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಉಡುಪಿ ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ .ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕಾರ್ಕಳ ಹಾಗೂ ಸುಂದರ ಪುರಾಣಿಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇವರ ಆಶ್ರಯದಲ್ಲಿ ನಡೆದ 14 ಮತ್ತು 17ರ ಬಾಲಕ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಎಂಟನೇ ತರಗತಿಯ ಪ್ರೇಕ್ಷ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಿದ್ಧಿ ಹಾಗೂ ಮನಸ್ವಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.ಇವರನ್ನು ಶಾಲಾ ಅಧ್ಯಕ್ಷರು ಮತ್ತು ಸದಸ್ಯರು ,ಶಾಲಾ ಆಡಳಿತ ಮಂಡಳಿಯವರು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಅಭಿನಂದಿಸಿದರು.