
ಉಡುಪಿ ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ ಇವರು ಆ.08 ರಂದು ಆಯೋಜಿಸಿದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕಲಾತ್ಮಕ ಜೋಡಿ ಯೋಗಾಸನದಲ್ಲಿ 9ನೇ ತರಗತಿಯ ಮಾನ್ವಿ ಜಿ , ಶ್ರಾವಣಿ ಹಾಗೂ 6ನೇ ತರಗತಿಯ ಸಿಯಾ ಶೆಟ್ಟಿ ,7ನೇ ತರಗತಿಯ ಶಾರ್ವಿ ಹೆಗ್ಡೆ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟದ ಯೋಗಾಸನ ಸ್ಪರ್ದೆ ಆಯ್ಕೆ ಆಗಿದ್ದಾರೆ.
ಜೇ.ಸಿ ಇಂಟರ್ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಆ.1 ರಂದು ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 10 ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದರು.
ಇವರನ್ನು ಶಾಲಾ ಅಧ್ಯಕ್ಷರು ಮತ್ತು ಸದಸ್ಯರು , ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ ಅಭಿನಂದಿಸಿದರು.
