28.2 C
Udupi
Thursday, April 30, 2026
spot_img
spot_img
HomeBlogಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟದ ಸಾಧನೆ

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟದ ಸಾಧನೆ


ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಚೂರು ಹೆಬ್ರಿ ಇವರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಅವಿನ್ಯ 400 ಮೀಟರ್, 100 ಮೀಟರ್ 200 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಪ್ರಜ್ವಲ್ 400 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, 8ನೇ ತರಗತಿಯ ಪ್ರಣವ್ ಡಿಸ್ಕಸ್ ತೋ ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಎಂಟನೇ ತರಗತಿ ಶ್ರಾವಣಿ 600 ಮೀಟ‌ರ್ ಓಟದಲ್ಲಿ ತೃತೀಯ ಸ್ಥಾನ, ಸಮೃದ್ಧಿ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಮತ್ತು 10ನೇ ತರಗತಿಯ ಸೃಜನ್ ಹರ್ಡಲ್ಸ್ ನಲ್ಲಿ ತೃತೀಯ ಸ್ಥಾನ ಹಾಗೂ ಹೈಸ್ಕೂಲ್ ಹುಡುಗರು 400X100 ಮೀಟರ್ ರಿಲೇಯಲ್ಲಿ ಪ್ರಜ್ವಲ್, ಮೇಲ್ರೀಕ್, ಸುಹಾನ್, ಭುವನ್ ಮತ್ತು 400x 400 ಮೀಟರ್ ರಿಲೇಯಲ್ಲಿ ಮೇಲ್ರೀಕ್, ಸ್ರಜನ್, ಮ್ಯಾನ್ಕೋ, ಪ್ರಜ್ವಲ್ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.


ಇವರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿಯವರು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಯಿನಿ ಶ್ರೀಮತಿ ಸುರೇಖಾ ರಾಜ್ ರವರು ದೈಹಿಕ ಶಿಕ್ಷಕರಾದ ಪ್ರತಾಪ್ ರವರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page