
ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಶ್ರೀ ವಿದ್ಯಾಸಮುದ್ರ ತೀರ್ಥ ಪ್ರೌಢಶಾಲೆ ಕಿದಿಯೂರು, ಉಡುಪಿ ಇವರ ಜಂಟಿ ಆಶಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟದಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಪ್ರಜ್ವಲ್ 400 ಮೀಟರ್ ಓಟದಲ್ಲಿ ಹಾಗೂ 8ನೇ ತರಗತಿಯ ಪ್ರಣಾಮ್ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರಾದ ಜೇಸಿ ಚಿತ್ತರಂಜನ್ ಶೆಟ್ಟಿಯವರು, ಶಾಲಾ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುರೇಖಾ ರಾಜ್ ರವರು, ದೈಹಿಕ ಶಿಕ್ಷಕರಾದ ಪ್ರತಾಪ್ ರವರು ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.



















