02 ವಿದ್ಯಾರ್ಥಿಗಳು ರಾಜ್ಯಕ್ಕೆ ದ್ವಿತೀಯ,11 ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಹತ್ತರೊಳಗಿನ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮಹಾಲಕ್ಷ್ಮೀ ಭಾರ್ಗವ್ ಮತ್ತು ಮಹಾಲಕ್ಷ್ಮೀ ಪೈ ಬಿ 624 ಅಂಕಗಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಹಾಗೂ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ವೈಷ್ಣವಿ ಶೆಟ್ಟಿಗಾರ್ 623
ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ಆರುಷಿ ಪೂಜಾರಿ 622 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ರಾಜ್ಯದ ಮೊದಲ ಹತ್ತು ಸ್ಥಾನಗಳಲ್ಲಿ ಸಂಸ್ಥೆಯ 11 ವಿದ್ಯಾರ್ಥಿಗಳು
ಗುರುತಿಸಿಕೊಂಡಿರುತ್ತಾರೆ. 116 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಶೇ. 100 ಫಲಿತಾಂಶ ಬಂದಿರುತ್ತದೆ . ಪರೀಕ್ಷೆಗೆ ಹಾಜರಾದ 116 ವಿದ್ಯಾರ್ಥಿಗಳಲ್ಲಿ 13 ವಿದ್ಯಾರ್ಥಿಗಳು 613 (98%) ಕ್ಕಿಂತ ಅಧಿಕ ಅಂಕಗಳನ್ನು, 30 ವಿದ್ಯಾರ್ಥಿಗಳು 600 (96%) ಕ್ಕೂ ಹೆಚ್ಚು ಅಂಕಗಳನ್ನು, 37 ವಿದ್ಯಾರ್ಥಿಗಳು 595 (95%) ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿರುತ್ತಾರೆ. 79 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ . 95 ಉತ್ತರಪತ್ರಿಕೆಗಳು 100 ಕ್ಕೆ 100 ಅಂಕಗಳನ್ನು ಪಡೆದಿರುತ್ತದೆ. ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಟ್ರಸ್ಟಿಗಳು, ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕರು ಅಭಿನಂದಿಸಿರುತ್ತಾರೆ.













