31.8 C
Udupi
Sunday, March 22, 2026
spot_img
spot_img
HomeBlogಜ್ಞಾನಸುಧಾ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ

ಜ್ಞಾನಸುಧಾ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ

ಪ್ರತಿಭಾ ಪುರಸ್ಕಾರ : ರೂ.1ಕೋಟಿ 5ಲಕ್ಷ ದಷ್ಟು ಮೊದಲನೇ ಹಂತದ ವಿದ್ಯಾರ್ಥಿ ವೇತನ ವಿತರಣೆ

ಭಾರತೀಯ ಸೇನೆಗೆ ರೂ. 2 ಲಕ್ಷ ನೆರವು ಜ್ಞಾನಸುಧಾದ ಕಾರ್ಯ ಪ್ರಶಂಸನೀಯ : ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಗಣಿತನಗರ : ಡಾ.ಸುಧಾಕರ್ ಶೆಟ್ಟಿಯವರ ಪರಿಕಲ್ಪನೆಯಲ್ಲಿ ಜ್ಞಾನಸುಧಾ ಸಂಸ್ಥೆಯು ಉತ್ತಮ ಶಿಕ್ಷಣದ ಜೊತೆಯಲ್ಲಿ ದೇಶಪ್ರೇಮಿಗಳನ್ನು ನಿರ್ಮಿಸುತ್ತಿರುವ ಕಾರ್ಯ ಪ್ರಶಂಸನೀಯ. ಉತ್ತಮ ಫಲಿತಾಂಶದ ಮೂಲಕ ರಾಜ್ಯದ ಮಾದರಿ ಸಂಸ್ಥೆಯಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ಪೂ ಜಾರಿ ನುಡಿದರು.
ಅವರು ಕಾರ್ಕಳ ಜ್ಞಾನಸುಧಾದ ಶ್ರೀ ಮಹಾಗಣಪತಿ ದೇವಸ್ಥಾನದ ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವದ ಸಂದರ್ಭ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಮೊದಲ ಹಂತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅಭ್ಯಾಗತರಾಗಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರ್ಕಳ ಕ್ಷೇತ್ರದ ಶಾಸಕ ಶ್ರೀ ವಿ. ಸುನಿಲ್ ಕುಮಾರ್‌ರವರು ಮೌಲ್ಯಗಳನ್ನು ಕೊಡುವಲ್ಲಿ ಮತ್ತು ಸಂಸ್ಕಾರ ಕೊಡುವಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆ ಬಹಳ ದೊಡ್ಡ ಹೆಜ್ಜೆಯನ್ನಿಡುತ್ತಿದೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಮಂಗಳೂರು ವಿ.ವಿಯ ಉಪಕುಲಪತಿಗಳಾದ ಪ್ರೊಫೆಸರ್ ಡಾ| ಪಿ.ಎಲ್.ಧರ್ಮ ಮಾತನಾಡಿ ಯುವಮನಸುಗಳಲ್ಲಿ ದೇಶಪ್ರೇಮವನ್ನು
ತುಂಬುವ ಕಾರ್ಯದ ಜೊತೆಗೆ, ಜ್ಞಾನಸುಧಾ ಪರಿವಾರ
ಅತ್ಯುತ್ತಮ ನಾಗರಿಕರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುವ ಕಾರ್ಯದಲ್ಲಿ ತನ್ನನ್ನು ಅರ್ಪಿಸಿಕೊಂಡಿದೆ ಎಂದರು.


ಸೇನೆಗೆ ನೆರವು : ಇದೇ ಸಂದರ್ಭ ಅಪರೇಷನ್ ಸಿಂಧೂರ್ ಯಶಸ್ಸಿನ ಹಿನ್ನಲೆಯಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಹಾಗೂ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ವತಿಯಿಂದ ರೂ. 2 ಲಕ್ಷ ಮೊತ್ತವನ್ನು ಭಾರತೀಯ ಸೇನೆಗೆ ದೇಣಿಗೆಯಾಗಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರ ಮೂಲಕ ಹಸ್ತಾಂತರಿಸಲಾಯತು.


ಸಾಧಕರಿಗೆ ಸನ್ಮಾನ :
ಎಸ್.ಎಸ್.ಎಲ್.ಸಿ.ಯಲ್ಲಿ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿದ ಸ್ವಸ್ತಿ ಕಾಮತ್ ಇವರಿಗೆ ಟ್ರಸ್ಟಿನ ವತಿಯಿಂದ ರೂ.2ಲಕ್ಷ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು. ಜೊತೆಗೆ ಕೆ.ಸಿ.ಇ.ಟಿ ಇಂಜಿನಿಯರಿಂಗ್ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕ್ ಗಳಿಸಿದ ತರುಣ್
ಸುರಾನರನ್ನು, ಜೆ.ಇ.ಇ ಮೈನ್ ಬಿ.ಪ್ಲಾನಿಂಗ್ ವಿಭಾಗದಲ್ಲಿ 99.9855627 ಪರ್ಸಂಟೈಲ್ ಪಡೆದು ಜನರಲ್ ವಿಭಾಗದಲ್ಲಿ 6ನೇ ಹಾಗೂ ಇ.ಡಬ್ಲು.ಎಸ್ ವರ್ಗದಲ್ಲಿ 1ನೇ ರ‍್ಯಾಂಕ್ ಮತ್ತು
ಬಿ.ಆರ್ಕ್ ವಿಭಾಗದಲ್ಲಿ 99.8881752 ಪರ್ಸಂಟೈಲ್ (ಗಣಿತಶಾಸ್ತ್ರದಲ್ಲಿ 100 ಪರ್ಸಂಟೈಲ್) ಪಡೆದು
ಇ.ಡಬ್ಲು.ಎಸ್. ವರ್ಗದಲ್ಲಿ 6ನೇ ಮತ್ತು ಜನರಲ್ ಮೆರಿಟ್ವಿಭಾಗದಲ್ಲಿ 83ನೇ ರ‍್ಯಾಂಕ್ ಪಡೆದ ಮನೋಜ್
ಕಾಮತ್‌ರವರನ್ನು, ಜೊತೆಗೆ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿಯ ಸಾಧಕರನ್ನೂ ಅಭಿನಂದಿಸಲಾಯಿತು.
ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ವತಿಯಿಂದ 2024-25ರ ವಾರ್ಷಿಕ ಪರೀಕ್ಷೆಯ ಸಾಧಕ ವಿದ್ಯಾರ್ಥಿಗಳಿಗೆ ರೂ. 64 ಲಕ್ಷದ 22 ಸಾವಿರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ರೂ.18 ಲಕ್ಷದ 78 ಸಾವಿರ, ಸಂಸ್ಥೆಯ ಉದ್ಯೋಗಿಗಳ ಮಕ್ಕಳ ಉಚಿತ ಶಿಕ್ಷಣಕ್ಕೆ ರೂ. 14 ಲಕ್ಷದ 87 ಸಾವಿರ, ಇಲಾಖಾ ಪರೀಕ್ಷೆಗಳಲ್ಲಿ ವಿದ್ಯಾರ್ಥಿ
ಗಳಿಸುವ ಪ್ರತೀ ನೂರು ಅಂಕಗಳಿಗೆ ವಿದ್ಯಾರ್ಥಿಗೆ ಹಾಗೂ ಉಪನ್ಯಾಸಕರಿಗೆ ತಲಾ ರೂ ಒಂದು ಸಾವಿರದಂತೆ
ರೂ. 7 ಲಕ್ಷದ 21 ಸಾವಿರವೂ ಸೇರಿದಂತೆ ಒಟ್ಟು ರೂ. 1 ಕೋಟಿ 5 ಲಕ್ಷದಷ್ಟು ವಿದ್ಯಾರ್ಥಿ ವೇತನವನ್ನು ನೀಡಲಾಯಿತು.
ಗೌರವ ಸನ್ಮಾನ : ಈ ವರ್ಷ ಸಂಸ್ಥೆಯಲ್ಲಿ ಹತ್ತು ವರ್ಷಗಳ ಸೇವೆ ಪೂರ್ಣಗೊಳಿಸಿದ 10 ಮಂದಿ ಬೋಧಕ- ಬೋಧಕೇತರ ಸಿಬ್ಬಂದಿ ವರ್ಗದವರಿಗೆ ತಲಾ 10ಸಾವಿರ
ನಿಶ್ಚಿತ ಠೇವಣಿಯನ್ನು ನೀಡಲಾಯಿತು. ದೇವಸ್ಥಾನದ ಸೇವೆಯಲ್ಲಿ ತೊಡಗಿಸಿಕೊಂಡ ವೇದಮೂರ್ತಿ ಭಗೀರಥ ಭಟ್ ಮತ್ತು ಶ್ರೀ ವಿಷ್ಣು ಮೂರ್ತಿ ಭಟ್‌ರವರನ್ನು ಹಾಗೂ ಶ್ರೀ ಮಹಾಗಣಪತಿ ದೇವಾಸ್ಥಾನದ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀ ಕಮಲಾಕ್ಷ ನಾಯಕ್‌ರವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಇದೇ ಸಂದರ್ಭ 2011 ರಿಂದ 2025ರವರಗೆ ಜ್ಞಾನಸುಧಾ ಬೆಳೆದು ಬಂದ ದಾರಿಯ ಹೊತ್ತಗೆ ‘ಅಗಣಿತ- ಸುಧಾಸ್ಪರ್ಷ’ವನ್ನು ಹಾಗೂ ಜ್ಞಾನಸುಧಾ ಪತ್ರಿಕೆ- 39ನ್ನು ಬಿಡುಗಡೆಗೊಳಿಸಲಾಯಿತು. ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಪ್ರಾಸ್ತಾವವಿಕ ನುಡಿಗಳನ್ನಾಡಿ ಸ್ವಾಗತಿಸಿದರು. ಆಂಗ್ಲಭಾಷಾ ಉಪನ್ಯಾಸಕಿ ಶ್ರೀಮತಿ ಸಂಗೀತಾ ಕುಲಾಲ್ ನಿರೂಪಿಸಿ ವಂದಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page