
ಆಗಸ್ಟ್ 19 : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ನ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ
ಆವರಣದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ
ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ
ಆಗಸ್ಟ್ 21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಆ ದಿನ ಬೆಳಗ್ಗೆ ಕೆ.ಎಂ.ಸಿ. ಬ್ಲಡ್ ಸೆಂಟರ್‌ನ ನೆರವಿನೊಂದಿಗೆ ರಕ್ತದಾನ ಶಿಬಿರ ನೆರವೇರಲಿರುವುದು.
ಸನ್ಮಾನ ಕಾರ್ಯಕ್ರಮ : ಇದೇ ಸಂದರ್ಭ ಖ್ಯಾತ ಸಮಾಜ
ಸೇವಕ ಶ್ರೀ ವಿಶು ಶೆಟ್ಟಿ, ಸ್ವಚ್ಛ ಕಾರ್ಕಳ ಬ್ರಿಗೇಡ್‌ನ
ಫೆಲಿಕ್ಸ್ ವಾಝ್ ಹಾಗೂ ಕುಕ್ಕುಂದೂರು, ಬೈಲೂರು,
ಹಿರ್ಗಾನ ಹಾಗೂ ಅಜೆಕಾರ್ ಗ್ರಾಮಗಳ ಸ್ವಚ್ಛತಾ
ಕಾರ್ಮಿಕರಿಗೆ ಗೌರವ ಜರುಗಲಿರುವುದು.
ರಕ್ತದಾನ ಶಿಬಿರವನ್ನು ಕಸ್ತೂರ್ಬಾ ಹಾಸ್ಪಿಟಲ್ ರಕ್ತನಿಧಿ
ಹಾಗೂ ಎಚ್.ಬಿ.ಟಿ ವಿಭಾಗದ ಮುಖ್ಯಸ್ಥ ಪ್ರೊಫೆಸರ್
ಡಾ.ಗಣೇಶ್ ಮೋಹನ್ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು
ಕಾರ್ಕಳ ರೋಟರಿ ಆಸ್ಪತ್ರೆಯ ಪ್ರಸೂತಿ ಹಾಗೂ ಸ್ತ್ರೀ
ರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಸಂಜಯ್
ವಹಿಸಲಿದ್ದಾರೆ. ಕುಕ್ಕುಂದೂರು ಗ್ರಾಮ ಪಂಚಾಯತ್
ಸದಸ್ಯರಾದ ರಹಮತ್ತುಲ್ಲಾ ಮುಖ್ಯ ಅತಿಥಿಗಳಾಗಿ
ಭಾಗವಹಿಸಲಿದ್ದಾರೆ ಎಂದು ಅಜೆಕಾರ್ ಪದ್ಮಗೋಪಾಲ್
ಎಜ್ಯುಕೇಶನ್ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.