
ಇದೇ ಬರುವ ಜ.26 ಸೋಮವಾರದಂದು ಕಾರ್ಕಳದ ಶ್ರೀ ಕ್ಷೇತ್ರ ಜೈನ ಮಠ, ದಾನಶಾಲೆಯಲ್ಲಿ ಲಲಿತಕೀರ್ತಿ ಭಟ್ಟಾರಕ ಭಟ್ಟಾಚಾರ್ಯವರ್ಯ ಸ್ವಾಮೀಜಿಯವರ ಪಾವನ ಸಾನಿಧ್ಯದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಾಧಿಕಾರಿಗಳಾದ ಪೂಜ್ಯ ಡಾ| ಡಿ. ವೀರೇಂದ್ರ ಹೆಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಕಾರ್ಕಳ ಶ್ರೀ ಜೈನ ಮಠದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ದ್ವಿತೀಯ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು, ಪೂಜೆ–ಪುನಸ್ಕಾರಗಳು ನಡೆಯಲಿದ್ದು ಬೆಳಗ್ಗೆ ವಿಶೇಷ ಪೂಜೆಗಳು, ಮಂಗಳಾರತಿ, ಧಾರ್ಮಿಕ ಉಪನ್ಯಾಸಗಳು ಹಾಗೂ ಭಕ್ತರಿಗಾಗಿ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಜೈನ ಸಮಾಜದ ಗಣ್ಯರು, ಸಾಧು–ಸಂತರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.



















