ಕೋಟ: ಡಾ. ಜಿ ಎಂದೇ ಖ್ಯಾತಿ ಪಡೆದು ದೇಶ ವಿದೇಶದಲ್ಲಿ ಲಕ್ಷಾಂತರ ಮಂದಿ ಅನುಯಾಯಿಗಳನ್ನು ಪಡೆದ ಸಾಲಿಗ್ರಾಮ ಡಿವೈನ್ ಪಾರ್ಕ್ ಸಂಸ್ಥಾಪಕ ಎ. ಚಂದ್ರಶೇಖರ್ ಉಡುಪ(75) ಹೃದಯಾಘಾತದಿಂದ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.
ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ನಿರ್ಮಾಣ ಮತ್ತು ರಾಷ್ಟ್ರೋದ್ದಾರದ ಕನಸನ್ನು ನನಸಾಗಿಸುವಲ್ಲಿ ಕಳೆದ ಸುಮಾರು 50 ವರ್ಷಗಳಿಂದ ಡಿವೈನ್ ಪಾರ್ಕ್ ಮೂಲಕ ಶ್ರಮಿಸುತ್ತಿದ್ದ ಚಂದ್ರಶೇಖರ್ ಅವರು ವೃತ್ತಿಯಲ್ಲಿ ವೈದ್ಯರಾಗಿದ್ದು ನಾಡಿಗೆ ಸೇವೆ ಸಲ್ಲಿಸುತ್ತಿದ್ದರು. ದೇಶ ವಿದೇಶದಲ್ಲಿ ಲಕ್ಷಾಂತರ ಮಂದಿ ಇವರ ಭಕ್ತರು, ಅನುಯಾಯಿಗಳು ಇದ್ದು ಅವರೆಲ್ಲರೂ ಪ್ರೀತಿಯಿಂದ ಡಾಕ್ಟರ್ ಜೀ ಎಂದೇ ಕರೆಯುತ್ತಿದ್ದರು.
ಮೃತರು ಪತ್ನಿ, ಪುತ್ರಿ, ಪುತ್ರ ಡಾ. ವಿವೇಕ ಉಡುಪ ಹಾಗೂ ಸೊಸೆಯನ್ನು ಅಗಲಿದ್ದು ಇಂದು ಬೆಳಗ್ಗೆ 10:30 ರಿಂದ ಸಂಜೆ 04:00 ರ ತನಕ ಡಿವೈನ್ ಪಾರ್ಕ್ ನ ಜ್ಞಾನ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.