
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಕೆಂಚಪ್ಪ ಗೌಡ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆಂಬ ಕಾರಣಕ್ಕೆ ಒಕ್ಕಲಿಗ ಸಮುದಾಯ ಮತವನ್ನು ಕಾಂಗ್ರೆಸ್‌ಗೆ ನೀಡಿದ್ದೇವೆ.
ಇಷ್ಟು ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಅವರು ಶ್ರಮ ಪಟ್ಟಿದ್ದಾರೆ. ಇದೀಗ ಡಿಕೆಶಿ ಅವರಿಗೆ ಅಕಸ್ಮಾತ್ ಸಿಎಂ ಪಟ್ಟ ವಂಚನೆಯಾದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬುದ್ದಿ ಕಲಿಸುತ್ತೇವೆ. ನಾವೆಲ್ಲರೂ ಡಿ.ಕೆ.ಶಿವಕುಮಾರ್ ಪರ ಹೋರಾಟಕ್ಕೆ ಸಿದ್ದವಾಗಿದ್ದೇವೆ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಇಷ್ಟು ವರ್ಷಗಳಿಂದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕಾದ್ರೇ ಶ್ರಮ ಪಟ್ಟಿದ್ದಾರೆ. ಅವ್ರ ಕಾರಣಕ್ಕೆ ಒಕ್ಕಲಿಗ ಸಮುದಾಯ ಮತವನ್ನು ಕಾಂಗ್ರೆಸ್ ಗೆ ನೀಡಿದ್ದೇವೆ. ಸಿದ್ದರಾಮಯ್ಯ ಅವರು ಸಿಎಂ ಆದಾಗ ನಮಗೆ ಆರಂಭದಲ್ಲಿ ಸಂತೋಷವಾಯ್ತು. ಆದ್ರೇ ಅವತ್ತು ಅಧಿಕಾರ ಹಂಚಿಕೆಯ ಕುರಿತು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ,ಖರ್ಗೆಯವರು ಭರವಸೆಯನ್ನು ಕೊಟ್ಟರು. ಅದರಂತೆ ಈಗ ಅಧಿಕಾರ ನೀಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವದಲ್ಲಿ ಇರಬೇಕಾದರೆ ಡಿಕೆಗೆ ಸಿಎಂ ಕೊಡಬೇಕು ಎಂದು ಆಗ್ರಹಿಸಿದರು.






















































