
ಬೆಂಗಳೂರು ಕೋಡಿಮಠದ ಸಂಸ್ಥಾನದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು “ಡಿಸಿಎಂ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ” ಎಂದು ಭವಿಷ್ಯ ನುಡಿದಿದ್ದಾರೆ.
ಡಿಕೆ ಶಿವಕುಮಾರ್ ಅವರು ಅರಸೀಕೆರೆಯ ಕೋಡಿಮಠಕ್ಕೆ ಭೇಟಿ ನೀಡಿ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರ ಆಶೀರ್ವಾದ ಪಡೆದು ಗೌಪ್ಯ ಸಭೆ ನಡೆಸಿದ್ದಾರೆ. ಸರ್ಕಾರಿ ಕಾರ್ಯಕ್ರಮದ ನಿಮಿತ್ತ ಅರಸೀಕೆರೆಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಹೆಲಿಕಾಪ್ಟರ್ ನಲ್ಲಿ ಬಂದಿದ್ದ ಡಿಕೆ ಶಿವಕುಮಾರ್ ಅಲ್ಲಿಂದ ಹಲವು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಬಳಿಕ ಕೋಡಿಮಠಕ್ಕೆ ಭೇಟಿ ನೀಡಿ ಬಂದ ವೇಳೆ ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆಗಳನ್ನು ಕೂಗಿದಾಗಲೂ ಡಿಕೆಶಿ ಅವರು ಏನು ಮಾತನಾಡದೆ ಸುಮ್ಮನಿರುವುದು ಭಾರಿ ಚರ್ಚೆಗೆ ಕಾರಣವಾಗಿದೆ.