ಮಂಗಳೂರು ವಿಶ್ವವಿದ್ಯಾನಿಲಯ, ಮಹಿಳೆಯರ ಅಂತರ ಕಾಲೇಜು ಹ್ಯಾಂಡ್ ಬಾಲ್ ಕ್ರೀಡಾಕೂಟ

ಡಿಸೆಂಬರ್ 2 ರಂದು ಕಾರ್ಕಳದ ಪ್ರತಿಷ್ಥಿತ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ಮಹಿಳೆಯರ ಅಂತರ್ ಕಾಲೇಜು ಹ್ಯಾಂಡ್ಬಾಲ್ ಕ್ರೀಡಾಕೂಟ.
ಕಾರ್ಕಳ: ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯದ ಮಹಿಳೆಯರ ಅಂತರ್ ಕಾಲೇಜು ಹ್ಯಾಂಡ್ಬಾಲ್ ಕ್ರೀಡಾಕೂಟವು ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಇಲ್ಲಿ ದಿನಾಂಕ 02.12.2025ರಂದು ನಡೆಯಲಿದೆ. ಬೆಳಗ್ಗೆ 9.30ಕ್ಕೆ ಕಾರ್ಕಳದ ಶಾಸಕರಾದ ಸುನಿಲ್ ಕುಮಾರ್ ಇವರು ಪಂದ್ಯಾಕೂಟವನ್ನು ಉದ್ಘಾಟಿಸಲಿದ್ದಾರೆ. ಸಮಾರಂಭದ ಮುಖ್ಯ ಅತಿಥಿಗಳಾಗಿ ಕಾರ್ಕಳದ ವಾಸ್ತುಶಿಲ್ಪಿಗಳಾದ ಪ್ರಮಲ್ ಕುಮಾರ್, ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಜೆರಲ್ಡ್ ಸಂತೋಷ್ ಡಿಸೋಜಾ಼, ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಕ್ರೀಡಾ ಕಾರ್ಯದರ್ಶಿಗಳಾದ ಸುನಿಲ್ ಕಾಮತ್ ಇವರುಗಳು ಪಾಲ್ಗೊಳ್ಳಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಸುರೇಶ್ ರೈ. ಕೆ ಇವರು ವಹಿಸಿಕೊಳ್ಳಲಿದ್ದಾರೆ.
ಸಂಜೆ 5ಕ್ಕೆ ನಡೆಯುವ ಬಹುಮಾನ ವಿತರಣಾ ಸಮಾರಂಭದಲ್ಲಿ ಕಾರ್ಕಳದ ವಕೀಲರು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀಮತಿ ಶಶಿರೇಖಾ ಹಾಗೂ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜಾರಾಮ್ ನಾಯಕ್ ಇವರು ಪಲ್ಗೊಳ್ಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆಗೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಸುರೇಶ್ ರೈ. ಕೆ ಇವರು ತಿಳಿಸಿರುತ್ತಾರೆ.






















































