79ನೇ ಸ್ವಾತಂತ್ರ್ಯೋತ್ಸವ ಮತ್ತು ಶೈಕ್ಷಣಿಕ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ

ತರುಣ ಭಾರತ ಚಾರಿಟೇಬಲ್ ಟ್ರಸ್ಟ್ (ರಿ.) ಹೆರ್ಮುಂಡೆ, ಕಾರ್ಕಳ ತಾಲೂಕು, ಉಡುಪಿ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆರ್ಮುಂಡೆ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 15/08/2025 ನೇ ಶುಕ್ರವಾರ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಮತ್ತು ಶೈಕ್ಷಣಿಕ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆರ್ಮುಂಡೆಯಲ್ಲಿ ನಡೆಸಲಾಯಿತು.
ಹಿರಿಯರಾದ ಹೆಚ್. ಆನಂದ ಹೆಗ್ಡೆಯವರು 79 ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ, ಆನಂತರ ನಡೆದ ಶೈಕ್ಷಣಿಕ ಪ್ರೋತ್ಸಾಹ ಧನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡರು. ತರುಣ ಭಾರತ ಚಾರಿಟೇಬಲ್ ಟ್ರಸ್ಟ್ ಹೆರ್ಮುಂಡೆ ಇವರ ನೇತೃತ್ವದಲ್ಲಿ ಎಸ್. ಎಸ್. ಎಲ್. ಸಿ. ನಂತರದ ವ್ಯಾಸಂಗ ಮಾಡುತ್ತಿರುವ ಹೆರ್ಮುಂಡೆ ಗ್ರಾಮದ 75 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ವಿತರಿಸಲಾಯಿತು. ಮುಖ್ಯ ಅತಿಥಿಗಳಾಗಿ ಜೀವನದಾಸ್ ನಾಯಕ್, ಶ್ರೀನಿವಾಸ ಆಚಾರ್ಯ, ಗ್ರಾಮ ಪಂಚಾಯತ್ ಸದಸ್ಯ ಕುರುಂಬಿಲ, ಸಜನ್ ನಾಯಕ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕರಾದ ಶ್ರೀಕಾಂತ ಭಟ್ ಸ್ವಾಗತ, ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಸತೀಶ ಹೆಗ್ಡೆ ಪ್ರಾಸ್ತಾವಿಕ, ಶ್ರೀಮತಿ ಅಶ್ವಿನಿ ಶೆಟ್ಟಿ ವಂದನಾರ್ಪಣೆ ಸಹ ಶಿಕ್ಷಕರಾದ ಸಂತೋಷ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿ ಸಹಕರಿಸಿದರು.
