
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜುಗಳ) ಕಾರ್ಕಳ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕಾರ್ಕಳದ ಎಸ್ ಎನ್ ವಿ ಪದವಿ ಪೂರ್ವ ಕಾಲೇಜಿನ ಬಾಲಕಯರ ತಂಡ ಉತ್ತಮ ಪ್ರದರ್ಶನದೊಂದಿಗೆ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇದೇ ಪಂದ್ಯಾವಳಿಯಲ್ಲಿ ಕಾಲೇಜಿನ ವಿದ್ಯಾರ್ಥಿ ಪ್ರೀತೇಶ್ ಇವರು ಉತ್ತಮ ರೈಡರ್ ಆಗಿ ವಿದ್ಯಾರ್ಥಿ ಶರಣ್ ಅವರು ಉತ್ತಮ ಡಿಪೆಂಡರ್ ಆಗಿ ವೈಯಕ್ತಿಕ ಪ್ರಶಸ್ತಿಗಳಿಗೆ ಭಾಜನರಾಗಿರುತ್ತಾರೆ.
ಬಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವರ್ಗದವರು, ತರಬೇತುದಾರರು, ಕಾಲೇಜಿನ ಹಳೆ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಕೋರಿರುತ್ತಾರೆ.



















