
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಕಾಲೇಜುಗಳ) ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಎಸ್.ಎನ್. ವಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಉತ್ತಮ ಪ್ರದರ್ಶನದೊಂದಿಗೆ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.
ಅದೇ ರೀತಿ ಬಾಲಕರ ತಂಡ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಕಾಲೇಜಿನ ವಿದ್ಯಾರ್ಥಿಗಳಾದ ವರುಣ್, ಗಗನ್ ಹಾಗು ಅರುಣ್ ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಉಪನ್ಯಾಸಕ ವರ್ಗದವರು, ತರಬೇತುದಾರರು, ಕಾಲೇಜಿನ ಹಳೆ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಕೋರಿರುತ್ತಾರೆ.































































































































