
ಕಾರ್ಕಳ:ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ನಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ರೆಂಜಾಳದ ವಿದ್ಯಾರ್ಥಿನಿಯರಾದ ಪೃಥ್ವಿ ಮತ್ತು ಚೈತ್ರ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ದೈಹಿಕ ಶಿಕ್ಷಕರಾದ ಅಣ್ಣಿ ಸಾಧಕ ವಿದ್ಯಾರ್ಥಿಗಳನ್ನು ತರಬೇತುಗೊಳಿಸಿದ್ದರು.ಸಂಸ್ಥೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಸಾಧಕ ವಿದ್ಯಾರ್ಥಿನಿಯರಿಗೆ ಅಭಿನಂದಿಸಿದ್ದಾರೆ






















































