32.3 C
Udupi
Friday, April 24, 2026
spot_img
spot_img
HomeBlogತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢ: ಗುಣಮಟ್ಟ ಪರೀಕ್ಷೆಗೆ...

ತಿರುಪತಿ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢ: ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

ಆಂಧ್ರ ಪ್ರದೇಶ ಸಿಎಂ ನಾಯ್ಡು ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ದೇವಸ್ಥಾನದ ಆಡಳಿತ ಮಂಡಳಿಯು ಸಮಿತಿಯನ್ನು ರಚಿಸಿದೆ.

ಗುರುವಾರ ಈ ಕುರಿತು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಜೆ ಶ್ಯಾಮಲಾ ರಾವ್ ಮಾತನಾಡಿ ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದ್ದಾರೆ.

ಸಮಿತಿಯು ಟೆಂಡರ್‌ಗಳಲ್ಲಿ ಗುಣಮಟ್ಟದ ತುಪ್ಪವನ್ನು ಖರೀದಿಸಲು ಸೇರಿಸಬೇಕಾದ ನಿಯಮಗಳು ಮತ್ತು ಷರತ್ತುಗಳ ಬಗ್ಗೆ ಸಲಹೆ ನೀಡಲಿದೆ ಎಂದು ಅವರು ಹೇಳಿದ್ದು ಗುತ್ತಿಗೆದಾರರು ಕಲಬೆರಕೆ ಮತ್ತು ಕಡಿಮೆ ಗುಣಮಟ್ಟದ ತುಪ್ಪವನ್ನು ಸರಬರಾಜು ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಿದ್ದಾರೆ.

ಯಾವುದೇ ಕಲಬೆರಕೆ ಪರೀಕ್ಷಾ ಸಾಧನಗಳಿಲ್ಲದ ಕಾರಣ ಸಂಗ್ರಹಣೆಯ ಮೂಲಕ ಕಚ್ಚಾ ವಸ್ತುಗಳು ಮತ್ತು ತುಪ್ಪವನ್ನು ಸಂಸ್ಕರಿಸುವ ವ್ಯವಸ್ಥೆಗಳಲ್ಲಿ ಮಿತಿಗಳು ಮತ್ತು ನಿರ್ಬಂಧಗಳಿವೆ ಎಂದು ಒಪ್ಪಿಕೊಂಡರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page