
ಬೆಂಗಳೂರು: ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳು ತಿರುಪತಿ ಪ್ರಸಾದದ ವಿಷಯದಲ್ಲಿ ನಡೆದ ಅಪವಿತ್ರ ಶುದ್ಧಿಗಾಗಿ ಉಪವಾಸ ಹಾಗೂ ಮೌನ ವ್ರತ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಶ್ರೀಗಳು ಮೂರು ದಿನಗಳ ಕಾಲ ಉಪವಾಸ ಹಾಗೂ ಮೌನ ವ್ರತ ಕೈಗೊಳ್ಳಲಿದ್ದು ಆಗಿರುವ ಅಪಚಾರಕ್ಕೆ ಸಾರ್ವಜನಿಕರು ಪ್ರಾಯಶ್ಚಿತ್ತ ಮಾಡಿಕೊಳ್ಳಲು ಶ್ರೀಗಳು ಕರೆ ನೀಡಿದ್ದಾರೆ. ಯಾವುದೇ ಪುರೋಹಿತರ ಅಗತ್ಯವಿಲ್ಲದೇ ಸಾರ್ವಜನಿಕರು ಮನೆಯಲ್ಲಿಯೇ ಮೂರು ರೀತಿಯ ಸರಳ ಪ್ರಾಯಶ್ಚಿತ್ತ ವಿಧಾನ ಮಾಡಿಕೊಳ್ಳುವ ವಿಧಾನವನ್ನು ಸೂಚಿಸಿದ್ದಾರೆ.













