28.7 C
Udupi
Friday, May 15, 2026
spot_img
spot_img
HomeBlogತೈಲ ಕಂಪನಿಗಳಿಂದ ದರ ಏರಿಕೆ ಘೋಷಣೆ; ಇಂದಿನಿಂದಲೇ ಹೊಸ ಬೆಲೆ ಜಾರಿ

ತೈಲ ಕಂಪನಿಗಳಿಂದ ದರ ಏರಿಕೆ ಘೋಷಣೆ; ಇಂದಿನಿಂದಲೇ ಹೊಸ ಬೆಲೆ ಜಾರಿ

ನವದೆಹಲಿ: ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಪ್ರತಿ ಲೀಟರ್‌ಗೆ ಸುಮಾರು 3 ರೂ. ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಶುಕ್ರವಾರ ಬೆಳಗ್ಗೆ ಪರಿಷ್ಕೃತ ದರ ಪ್ರಕಟಿಸಿದ್ದು, ಹೊಸ ಬೆಲೆಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.

ಸ್ಥಳೀಯ ತೆರಿಗೆ ಆಧಾರದಲ್ಲಿ ರಾಜ್ಯಾವಾರು ದರದಲ್ಲಿ ಸ್ವಲ್ಪ ವ್ಯತ್ಯಾಸ ಇರಲಿದ್ದು ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 94.77 ರೂ.ಗಳಿಂದ 97.77 ರೂ.ಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ 87.67 ರೂ.ಗಳಿಂದ 90.67 ರೂ.ಗೆ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 106.17 ರೂ.ಗೆ ತಲುಪಿದರೆ, ಡೀಸೆಲ್ ದರ 94.10 ರೂ. ಆಗಿದೆ. ಮುಂಬೈನಲ್ಲಿ ಪೆಟ್ರೋಲ್ 106.68 ರೂ. ಹಾಗೂ ಡೀಸೆಲ್ 93.14 ರೂ.ಗೆ ಏರಿಕೆಯಾಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ 108.74 ರೂ. ಮತ್ತು ಡೀಸೆಲ್ 95.13 ರೂ.ಗೆ ತಲುಪಿದೆ. ಚೆನ್ನೈನಲ್ಲಿ ಪೆಟ್ರೋಲ್ 103.67 ರೂ. ಹಾಗೂ ಡೀಸೆಲ್ 95.25 ರೂ. ಆಗಿದೆ.

ಮಧ್ಯಪ್ರಾಚ್ಯ ಉದ್ವಿಗ್ನತೆ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಏರಿಕೆಯ ನಡುವೆಯೂ ಭಾರತ ಇಂಧನ ದರ ಹೆಚ್ಚಳವನ್ನು ಇಷ್ಟು ದಿನ ತಡೆಹಿಡಿದಿತ್ತು. ಆದರೆ ಅಂತಾರಾಷ್ಟ್ರೀಯ ಬೆಲೆ ಏರಿಕೆಯಿಂದ ತೈಲ ಕಂಪನಿಗಳ ಮೇಲಿನ ಒತ್ತಡ ಹೆಚ್ಚಾದ ಹಿನ್ನೆಲೆ ದರ ಪರಿಷ್ಕರಣೆ ಅನಿವಾರ್ಯವಾಗಿದೆ.

ಇದಕ್ಕೂ ಮೊದಲು ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಆದರೂ ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದ ಇಂಧನ ದರ ಇಳಿಕೆಯಾಗಿರಲಿಲ್ಲ. ಕಚ್ಚಾ ತೈಲ ಬೆಲೆ ಮತ್ತಷ್ಟು ಏರಿದರೆ ಸರ್ಕಾರಿ ತೈಲ ಕಂಪನಿಗಳಿಗೆ ಭಾರೀ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಸರ್ಕಾರ ಈಗಾಗಲೇ ಸೂಚನೆ ನೀಡಿತ್ತು. ಇಂಧನ ಬಳಕೆಯನ್ನು ಮಿತಿಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕೆಲವೇ ದಿನಗಳ ಹಿಂದೆ ಜನರಿಗೆ ಕರೆ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page