
ಮಂಗಳೂರು: ಸಾಲು ಸಾಲು ಹತ್ಯೆಗಳಿಂದ ಪ್ರಕ್ಷುಬ್ಧಗೊಂಡಿದ್ದ ದಕ್ಷಿಣ ಕನ್ನಡದಲ್ಲೀಗ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಸೇರಿದಂತೆ ಒಟ್ಟು 36 ಜನರ ಗಡಿಪಾರಿಗೆ ಪೊಲೀಸ್ ಇಲಾಖೆ ಕಾನೂನು ಪ್ರಕ್ರಿಯೆ ಆರಂಭಿಸಿದೆ.
ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ವಿಟ್ಲ, ಸುಳ್ಯ, ಬೆಳ್ಳಾರೆ, ಬೆಳ್ತಂಗಡಿ, ಪುಂಜಾಲಕಟ್ಟೆ, ಕಡಬ, ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿನ 15 ಜನ ಮುಸ್ಲಿಮರು ಸೇರಿದಂತೆ ಒಟ್ಟು 36 ಜನರನ್ನ ಗಡಿಪಾರು ಮಾಡಲು ಪೊಲೀಸ್ ಇಲಾಖೆ ಮುಂದಾಗಿದ್ದು ಈ ಲಿಸ್ಟ್ನಲ್ಲಿ ಭರತ್ ಕುಮ್ಡೇಲು, ಮಹೇಶ್ ಶೆಟ್ಟಿ ತಿಮರೋಡಿ ಕೂಡ ಸೇರಿದ್ದಾರೆ.