
ಭಾರತದ ಜಾವೆಲಿನ್ ಎಸೆತಗಾರ, ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ತಮ್ಮ ಬಹುಕಾಲದ ಗೆಳೆತಿ ಹಿಮಾನಿ ಮೋರ್ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಈ ಕುರಿತು ಸ್ವತಃ ನೀರಜ್ ಚೋಪ್ರಾ ಪೋಸ್ಟ್ ಹಂಚಿಕೊಂಡಿದ್ದು ನಿಮ್ಮೆಲ್ಲರ ಆಶೀರ್ವಾದದೊಂದಿಗೆ ಹೊಸ ಜೀವನಕ್ಕೆ ಕಾಲಿಟ್ಟಿದ್ದೇನೆ. ನಮ್ಮ ಈ ಕ್ಷಣಗಳಿಗೆ ಸಾಕ್ಷಿಯಾಗಿ ಆಶೀರ್ವದಿಸಿದ ಪ್ರತಿಯೊಬ್ಬರಿಗೂ ಕೃತಜ್ಞರಾಗಿರುತ್ತೇನೆ. ಪ್ರೀತಿಯೊಂದಿಗೆ ಸುಖವಾಗಿ ಬಾಳುವೆ ಎಂದು ಬರೆದು ಫೋಟೋ ಹಂಚಿಕೊಂಡಿದ್ದಾರೆ.
ಹರಿಯಾಣದ ಸೋನಿಪತ್ ಮೂಲದವರಾದ ಹಿಮಾನಿ ಮೊರ್, ಈ ಹಿಂದೆ ರಾಷ್ಟ್ರೀಯ ಟೆನಿಸ್ ಟೂರ್ನಿಗಳಲ್ಲಿ ಕಾಣಿಸಿಕೊಂಡಿದ್ದರು. ಬಳಿಕ ಉನ್ನತದ ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿದ ಹಿಮಾನಿ ಲೂಯಿಸಿಯಾನ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ಪಡೆದಿದ್ದರು. ಇದೀಗ ನ್ಯೂ ಹ್ಯಾಂಪ್‌ಶೈರ್‌ನಲ್ಲಿರುವ ಫ್ರಾಂಕ್ಲಿನ್ ಪಿಯರ್ಸ್ ವಿಶ್ವವಿದ್ಯಾಲಯದಲ್ಲಿ ಸ್ಪೋರ್ಟ್ಸ್ ಮ್ಯಾನೇಜ್ಮೆಂಟ್ನಲ್ಲಿ (ಮೇಜರ್) ಸ್ನಾತಕೋತ್ತರ ಪದವಿಯನ್ನು ಪಡೆಯುತ್ತಿದ್ದಾರೆ.





















