16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ..,,!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿದ್ದು, ಬಜೆಟ್ ನಲ್ಲಿ ಮದ್ಯದ ದರವನ್ನು ಹಂತ ಹಂತವಾಗಿ ಏರಿಕೆ ಮಾಡುವ ಘೋಷಣೆ ಮಾಡಿದ್ದಾರೆ.
ಅಡಿಕೆ ಮತ್ತು ತೆಂಗು ಬೆಳೆಗಾರರಿಗೆ 10 ಕೋಟಿ ರೂಪಾಯಿ ಮೀಸಲು ಘೋಷಣೆ,
ಶಕ್ತಿ ಯೋಜನೆಗೆ 5,300 ಕೋಟಿ ರೂ. ಹಾಗೂ ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. ಮೀಸಲಿಡಲಾಗಿದೆ.
ಇನ್ನೂ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಎರಡು ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.
ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ , ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಘೋಷಣೆ
ಮಕ್ಕಳ ರಕ್ಷಣೆಗಾಗಿ ಮಹತ್ವದ ತೀರ್ಮಾನ ಕೈಗೊಂಡಿದ್ದು 16 ವರ್ಷದ ಒಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸುವ ಮಹತ್ವದ ಪ್ರಸ್ತಾವನೆಯನ್ನು ಘೋಷಿಸಿದ್ದಾರೆ.
ಬೀದಿನಾಯಿಗಳ ಹಾವಳಿಗೆ ಬ್ರೇಕ್ ಹಾಕಲು, ಬೀದಿ ನಾಯಿಗಳ ಸಂತಾನ ನಿಯಂತ್ರಣಕ್ಕಾಗಿ ವಿಶೇಷ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು.






