
ಬೆಂಗಳೂರು: ಗೃಹ ಕಚೇರಿ ಕೃಷ್ಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜಾತಿಗಣತಿ ಸಮೀಕ್ಷೆಯ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು ಈ ಸಭೆಯಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಾತಿಗಣತಿ ಸಮೀಕ್ಷೆಗೆ ಅ.23ರ ವರೆಗೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ ಎಂದು ನಿರ್ಧರಿಸಲಾಗಿದೆ.
ಸಭೆ ಬಳಿಕ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅ.23ರ ವರೆಗೆ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್ ನೀಡಲಾಗಿದ್ದು ಬೆಂಗಳೂರಿನಲ್ಲಿ ಅ.23 ರಿಂದ 31 ರವರೆಗೆ ಸಮೀಕ್ಷೆ ಮುಂದುವರಿಕೆ ಆಗಲಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸಮೀಕ್ಷೆ ಮಂದಗತಿಯಲ್ಲಿ ಸಾಗ್ತಿರೋದಕ್ಕೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ. ಜಾತಿಗಣತಿಯು 27 ಜಿಲ್ಲೆಯಲ್ಲಿ 90% ಜಾಸ್ತಿ ಆಗಿದೆ. ರಾಮನಗರ, ಬೀದರ್, ಬೆಂಗಳೂರು ಅರ್ಬನ್ ಕಡಿಮೆ ಆಗಿದೆ. ಬೆಂಗಳೂರು ಅರ್ಬನ್ 50% ಆಗಿದೆ. ಬೆಂಗಳೂರಿನಲ್ಲಿ ಅ.23 ರಿಂದ 31 ರವರೆಗೆ ಗಣತಿ ಮಾಡಲು ಸೂಚನೆ ನೀಡಲಾಗಿದೆ. ಶಿಕ್ಷಕರಿಗಿಲ್ಲ, ಬೇರೆ ಸ್ಟಾಫ್ಗಳ ಕೈಲಿ ಸಮೀಕ್ಷೆ ಮಾಡಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸಭೆ ಬಳಿಕ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಅ.23ರ ವರೆಗೆ ಸಮೀಕ್ಷೆಗೆ ತಾತ್ಕಾಲಿಕ ಬ್ರೇಕ್ ನೀಡಲಾಗಿದೆ. ಬೆಂಗಳೂರಿನಲ್ಲಿ ಅ.23 ರಿಂದ 31 ರವರೆಗೆ ಸಮೀಕ್ಷೆ ಮುಂದುವರಿಕೆ ಆಗಲಿದೆ ಎಂದು ತಿಳಿಸಿದ್ದಾರೆ.











