
ಕೊಪ್ಪಳ: ನವದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ 12 ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಭಾಗಿಯಾಗುವ ಸುವರ್ಣವಕಾಶ ಒದಗಿ ಬಂದಿದೆ.
ಕರ್ನಾಟಕದಿಂದ ಹಾವೇರಿ ಜಿಲ್ಲೆಯ ಹುನಗುಂದ ಗ್ರಾಮ ಪಂಚಾಯತ್ ಅಧ್ಯಕ್ಷೆ ಲಕ್ಷ್ಮವ್ವ ತಳವಾರ್, ಮೈಸೂರು ಜಿಲ್ಲೆಯ ಕರಿಮುದ್ದನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಮಹದೇವ್, ಹಾಸನ ಜಿಲ್ಲೆಯ ಬಿರದಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಸತಿಶ್ ಎಚ್ಡಿ, ಮಂಡ್ಯ, ಕೊಡಗು, ಚಿತ್ರದುರ್ಗ, ಗದಗ ಜಿಲ್ಲೆಗೆ ಸೇರಿರುವ ಒಟ್ಟು 12 ಗ್ರಾಮ ಪಂಚಾಯತ್ ಅಧ್ಯಕ್ಷರು ದೆಹಲಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ತೆರಳಲಿದ್ದು ಗ್ರಾಮ ಪಂಚಾಯತ್ ಅಧ್ಯಕ್ಷೆ, ಅಧ್ಯಕ್ಷರ ಜೊತೆ ಅವರ ಪತಿ, ಪತ್ನಿಯನ್ನು ಕೂಡಾ ಕರೆದುಕೊಂಡು ಹೋಗಲು ಅವಕಾಶವಿದೆ.
ಈ ಬಗ್ಗೆ ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶಕರು, ಆಯ್ಕೆಯಾಗಿರುವ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಓ ಗಳಿಗೆ ಪತ್ರ ಬರೆದಿದ್ದು, ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಹೋಗುವ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಅವರ ಕುಟುಂಬದ ಓರ್ವರಿಗೆ ಹೋಗಿ ಬರಲು ಮತ್ತು ತಂಗಲು ವ್ಯವಸ್ಥೆ ಕಲ್ಪಿಸಲು ಸೂಚಿಸಿದ್ದಾರೆ.





















