
ದೆಹಲಿ: 26 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೇರುತ್ತಿದ್ದು, ರಾಮಲೀಲಾ ಮೈದಾನದ ಹೊರಗೆ ಸಂಭ್ರಮಾಚರಣೆ ಮುಂದುವರಿದಿದೆ. ಇಂದು ಬಿಜೆಪಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಹೀಗಾಗಿ ರಾಮಲೀಲಾ ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಹಲವು ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳ ಸಿಎಂಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕಾರ್ಯಕ್ರಮವಾಗಿ ರಾಮಲೀಲಾ ಮೈದಾನದಲ್ಲಿ ಕಟ್ಟುನಿಟ್ಟಿನ ಭದ್ರತೆ ಏರ್ಪಡಿಸಲಾಗಿದೆ.