
ಮಂಗಳೂರು: ಧರ್ಮಸ್ಥಳ ಗ್ರಾಮದ ಸುತ್ತಮುತ್ತ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡಿದ್ದ ಅನಾಮಿಕನ ಅಸಲಿ ಮುಖ ಈಗ ಅನಾವರಣಗೊಂಡಿದೆ.
ಎಸ್ಐಟಿ ಅಧಿಕಾರಿಗಳು ಮುಸುಕುದಾರ ವ್ಯಕ್ತಿಯನ್ನು ಬಂಧಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಿದ್ದಾರೆ. ಅನಾಮಿಕ ಮೂಲತಃ ಮಂಡ್ಯ ಜಿಲ್ಲೆಯವನು ಎನ್ನಲಾಗಿದ್ದು, ಆತನ ಹೆಸರು ಸಿಎ ಚಿನ್ನಯ್ಯ ಅಲಿಯಾಸ್ ಚೆನ್ನ ಎಂದು ಹೇಳಲಾಗುತ್ತಿದೆ.