
ನವದೆಹಲಿ: ಇಂದು ಸುಪ್ರೀಂ ಕೋರ್ಟ್ ಧರ್ಮಸ್ಥಳ ಗ್ರಾಮದ ಸುತ್ತಮುತ್ತ ಮೃತ ದೇಹಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ತಡೆ ನೀಡಲು ನಿರಾಕರಣೆ ಮಾಡಿ ಆದೇಶ ಹೊರಡಿಸಿದೆ.
ಧರ್ಮಸ್ಥಳ ದೇವಸ್ಥಾನದ ಕಾರ್ಯದರ್ಶಿ, ಡಿ ಹರ್ಷೇಂದ್ರ ಕುಮಾರ್ ಅವರು ಮಾನಹಾನಿಕರ ವಿಷಯವನ್ನು ತೆಗೆದುಹಾಕುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ನ್ಯಾಯಮೂರ್ತಿಗಳಾದ ರಾಜೇಶ್ ಬಿಂದಾಲ್ ಮತ್ತು ಮನಮೋಹನ್ ಅವರ ಪೀಠವು ದೇವಾಲಯವನ್ನು ನಿರ್ವಹಿಸುವ ಕುಟುಂಬವನ್ನು ಗುರಿಯಾಗಿಸಿಕೊಂಡು ಮಾಡಿರುವ ಮಾನಹಾನಿಕರ ವಿಷಯವನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೊಸದಾಗಿ ತೀರ್ಮಾನಿಸುವಂತೆ ಕರ್ನಾಟಕದ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿ ಅರ್ಜಿದಾರರು ಎಲ್ಲಾ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಇಡಲು ಹೇಳಿದೆ.