
ಮಂಗಳೂರು: ಎಸ್‌ಐಟಿ ಅಧಿಕಾರಿಗಳು ಧರ್ಮಸ್ಥಳದ ವಿವಿಧ ಭಾಗಗಳಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಗಾಗಿ ಮಂಗಳೂರಿನ ಮಲ್ಲಿಕಟ್ಟೆಯ ಐ.ಬಿಯಲ್ಲಿರುವ ಎಸ್ಐಟಿ ಕಚೇರಿಯನ್ನು ಸಂಪರ್ಕಿಸಲು ಸಹಾಯವಾಣಿ ತೆರೆದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ನೀಡಲು ದೂರವಾಣಿ ಸಂಖ್ಯೆ 0824 – 2005301 ಸಂಖ್ಯೆಯನ್ನು ಸಂಪರ್ಕಿಸಲು ಮನವಿ ಮಾಡಲಾಗಿದೆ.
ಈಗಾಗಲೇ ಶವಗಳ ಪತ್ತೆಗೆ ಜಾಗ ಅಗೆಯುವ ಕಾರ್ಯ ಬುಧವಾರವೂ ಮುಂದುವರಿದಿದ್ದು ಆದರೆ, ದೂರುದಾರ ತೋರಿಸಿದ ಜಾಗದಲ್ಲಿ ಇದುವರೆಗೂ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಅನಾಮಿಕ ತೋರಿಸುವ ಜಾಗದಲ್ಲಿ ಉತ್ಖನನ ಕಾರ್ಯ ಮತ್ತೆ ನಡೆಯಲಿದ್ದು ಈ ಕುರಿತು ಯಾವುದೇ ಕುರುಹು ಸಿಗಬಹುದೇ ಎಂದು ಎಸ್‌ಐಟಿ ಅಧಿಕಾರಿಗಳು ಹುಡುಕಾಟ ಮುಂದುವರಿಸಿದ್ದಾರೆ.