
ಧಾರವಾಡ: ನಗರದ ಕರ್ನಾಟಕ ವಿಶ್ವವಿದ್ಯಾಲಯ ರಸ್ತೆಯ ರಂಕಾ ಸ್ಟೆಲ್ಲೊ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿದ್ದ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣನವರ್ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಕೃತ್ಯವನ್ನು ಅವರ ಪತ್ನಿ ಡಾ. ಪ್ರಿಯಾ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆಯ ವೇಳೆ ಮಧ್ಯಪ್ರವೇಶಿಸಲು ಯತ್ನಿಸಿದ 10 ವರ್ಷದ ಮಗನ ಮೇಲೂ ಚಾಕುವಿನಿಂದ ದಾಳಿ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














































