
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮಾರು ಗ್ರಾಮದ ಬಳಿ ವರುಣನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿದಿರುವ ಘಟನೆ ಸಂಭವಿಸಿದೆ.
ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿಯದಂತೆ ರಸ್ತೆ ಬದಿಗೆ ಕಟ್ಟಿದ್ದ ಕಬ್ಬಿಣದ ತಡೆಗೋಡೆಗಳು ಕುಸಿದು ಬಿದ್ದಿದ್ದು ಪರಿಣಾಮ ಶೃಂಗೇರಿ-ಮಂಗಳೂರು ಸಂಚಾರ ಕೂಡ ಸಂಪೂರ್ಣ ಸ್ಥಗಿತಗೊಂಡಿದ್ದು ಪೊಲೀಸ್, ಪಂಚಾಯಿತಿ ಅಧಿಕಾರಿಗಳು ಹಾಗೂ ಸ್ಥಳೀಯರು ಸುರಿಯುತ್ತಿರುವ ಮಳೆ ಮಧ್ಯೆಯೇ ರಸ್ತೆಗೆ ಉರುಳಿರುವ ಮಣ್ಣಿನ ತೆರವು ಕಾರ್ಯಕ್ಕೆ ಮುಂದಾಗಿದ್ದಾರೆ. ಮಳೆ ಪ್ರಮಾಣ ಮತ್ತಷ್ಟು ಹೆಚ್ಚಾದರೆ ಇನ್ನಷ್ಟು ಭೂಮಿ ಕುಸಿಯುವ ಆತಂಕ ಎದುರಾಗಿದ್ದು, ವಾಹನ ಚಾಲಕರು ಬದಲಿ ಮಾರ್ಗವನ್ನು ಬಳಸಬೇಕಿದೆ.



















