24.4 C
Udupi
Saturday, August 16, 2025
spot_img
spot_img
HomeBlogಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ

ರಿಟ್ ಅರ್ಜಿ ಕುರಿತಂತೆ ಉದಯ ಕುಮಾರ್ ಶೆಟ್ಟಿ ಮೌನ ಸರಿಯಲ್ಲ

ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ಅಧ್ಯಕ್ಷರು ಸ್ಪಷ್ಟನೆ ನೀಡುವಂತೆ ನಿತಿನ್ ಪೂಜಾರಿ ಆಗ್ರಹ

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನ ವಿಷಯದಲ್ಲಿ ಕಾರ್ಕಳದಲ್ಲಿ ರಾಜಕೀಯ ಮುಖಂಡರು ಜನರ ಧಾರ್ಮಿಕ ಭಾವನೆಗಳನ್ನು ಅರ್ಥ ಮಾಡಿಕೊಳ್ಳದೆ ತಮಗಿಷ್ಟ ಬಂದಂತೆ ಹೇಳಿಕೆಗಳನ್ನು ನೀಡುತ್ತಿರುವುದು ನಮ್ಮ ಗಮನಕ್ಕೆ ಬಂದಿರುತ್ತದೆ. ಪರಶುರಾಮ ಮೂರ್ತಿಯ ವಿಚಾರದಲ್ಲಿ ಬಿಜೆಪಿಯವರ ಮೇಲೆ ಅಪವಾದ ಇರುವ ಸಂದರ್ಭದಲ್ಲಿ ಕಾರ್ಕಳ ಮಾನ್ಯ ನ್ಯಾಯಾಲಯದಿಂದ ಪೊಲೀಸ್ ತನಿಖೆಯ ಚಾರ್ಜ್ ಶೀಟ್ ನಲ್ಲಿರುವ ವಿಚಾರವನ್ನು ತಿಳಿದುಕೊಳ್ಳದೆ ತರಾತುರಿಯಲ್ಲಿ ಮಾನ್ಯ ಉಚ್ಛ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಉದಯಶೆಟ್ಟಿಯವರು, ರಿಟ್ ಅರ್ಜಿಯ ವಿಚಾರವನ್ನು ಸಮರ್ಥಿಸಿಕೊಳ್ಳದೆ ಮೌನಕ್ಕೆ ಶರಣಾಗಿರುವುದು ಸರಿಯಲ್ಲ ಎಂಬುದು ನನ್ನ ಭಾವನೆ. ಅವರ ಈ ಮೌನವು ರಾಜ್ಯ ಸರ್ಕಾರಕ್ಕೆ ಮತ್ತು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯ ಪರಶುರಾಮ ಮೂರ್ತಿಯ ಪುನರ್ ನಿರ್ಮಾಣದ ಇಚ್ಚಾ ಶಕ್ತಿಗೆ ಹಿನ್ನಡೆಯಾಗುವ ಸಂಭವವಿದೆ.

ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ್ ಅವರು ಕಾರ್ಕಳದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ ಕುಟುಂಬೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಪರಶುರಾಮ ಮೂರ್ತಿಯನ್ನು ಮುಂಬರುವ ವಿಧಾನಸಭಾ ಚುನಾವಣೆಯ ವಿಷಯವನ್ನಾಗಿಸಿ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಆದರೆ ಈ ಹೇಳಿಕೆಯನ್ನು ಅವರಿಂದ ನಾಯಕರು ಹೇಳಿಸಿದ್ದಾರೆ ಎಂದು ಕಾರ್ಕಳದ ಹಿರಿಯ ಕಾಂಗ್ರೆಸ್ ನಾಯಕರು ಪರಶುರಾಮ ಮೂರ್ತಿಯ ವಿಚಾರದಲ್ಲಿ ಅಂತರ ಕಾಯ್ದುಕೊಂಡಿದ್ದಾರೆ.

ಇದರ ಲಾಭವನ್ನು ಪಡೆದುಕೊಂಡ ಕಾರ್ಕಳದ ಬಿಜೆಪಿಗರು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಅವರ ವಿರುದ್ಧ ನಿರಂತರ ಅಪಪ್ರಚಾರದಲ್ಲಿ ತೊಡಗಿದ್ದಾರೆ.

ಪ್ರಸ್ತುತ ನಿರ್ಮಾಣವಾಗಿರುವ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನ ಗೋಮಾಳ ಜಾಗವನ್ನು ಕಂದಾಯ ಇಲಾಖೆಗೆ ಹಸ್ತಾಂತರಿಸುವ ಕಾರ್ಯ ಪ್ರಥಮವಾಗಿ ನಡೆಯಬೇಕಿದ್ದು, ಈ ನಡುವೆ ಕಾರ್ಕಳದ ಬಿಜೆಪಿ ನಾಯಕರಿಂದ ಕಾರ್ಕಳದ ಜನತೆಗೆ ಉದಯಕುಮಾರ್ ಶೆಟ್ಟಿಯವರು ಮಾನ್ಯ ಉಚ್ಛ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ವಿಚಾರ ತಿಳಿದು ಬಂದಿರುವುದು ಗೊಂದಲಕ್ಕೆ ಕಾರಣವಾಗಿದ್ದು, ಈ ಬಗ್ಗೆ ಸಮಿತಿಯ ಅಧ್ಯಕ್ಷರು ಈ ಕೂಡಲೇ ಸ್ಪಷ್ಟಿಕರಣ ನೀಡಬೇಕೆಂದು ಆಗ್ರಹ ಮಾಡುತ್ತೇನೆ.

spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page