22.3 C
Udupi
Tuesday, February 3, 2026
spot_img
spot_img
HomeBlogನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಯಲ್ಲಿ ಚಲಾಯಿಸಿದರೆ ಸೆಕ್ಷನ್‌ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲು

ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಯಲ್ಲಿ ಚಲಾಯಿಸಿದರೆ ಸೆಕ್ಷನ್‌ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರು ಪೊಲೀಸರು ನಂಬರ್ ಪ್ಲೇಟ್ ಇಲ್ಲದ ವಾಹನಗಳನ್ನು ರಸ್ತೆಗೆ ಇಳಿಸಿದ್ರೆ ಸೆಕ್ಷನ್‌ 420 ಅಡಿಯಲ್ಲಿ ವಂಚನೆ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

ಕೆಲವರು ಸಂಚಾರಿ ನಿಯಮ ಉಲ್ಲಂಘನೆ ಮರೆಮಾಚಲು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಕೆಲ ಪುಂಡರು ವಾಹನಗಳಿಗೆ ನಂಬರ್ ಪ್ಲೇಟ್ ಹಾಕದೆ, ನಂಬರ್ ಪ್ಲೇಟ್ ವಿಕಾರಗೊಳಿಸಿ ಓಡಾಡುತ್ತಿದ್ದು ಅಂತವರನ್ನು ಮಟ್ಟ ಹಾಕಲು ಪೊಲೀಸರು ಕಠಿಣ ನಿರ್ಧಾರಕ್ಕೆ ಮುಂದಾಗಿದ್ದಾರೆ.

ಒಂದು ರಾತ್ರಿಯಲ್ಲೇ ನಗರದಾದ್ಯಂತ ಸುಮಾರು 1000 ವಾಹನಗಳನ್ನ ಪೊಲೀಸರು ಸೀಜ್ ಮಾಡಿದ್ದು ಕೆಲವರು ಸಮರ್ಪಕ ಕಾರಣ ನೀಡಿ ವಾಹನ ಬಿಡಿಸಿಕೊಂಡು ಹೋದರೆ, ಉಳಿದವರು ಸಮರ್ಪಕವಾದ ಕಾರಣ ನೀಡದೆ ಹೋಗಿದ್ದರಿಂದ ವಂಚನೆ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಾದವರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗುತ್ತಿದ್ದು ವಾಹನ ಸವಾರರು ಕೋರ್ಟ್ ಮುಖಾಂತರವೇ ತಮ್ಮ ವಾಹನಗಳನ್ನು ಬಿಡಿಸಿಕೊಳ್ಳುವಂತೆ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page