
ನವದೆಹಲಿ: ದೇಶದ ನಗರಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಶೀಘ್ರದಲ್ಲೇ ‘ಹಾರುವ ಬಸ್’ ಸೇವೆ ಆರಂಭಿಸುವ ಯೋಜನೆ ಇದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಘಡ್ಕರಿ ತಿಳಿಸಿದ್ದಾರೆ.
ಲಕ್ನೋ–ಕಾನ್ಪುರ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿ ಮಾತನಾಡಿದ ಅವರು, ಭಾರತದಲ್ಲಿ ಈಗಾಗಲೇ ಸೀಪ್ಲೇನ್‌ಗಳನ್ನು ಯಶಸ್ವಿಯಾಗಿ ಪರಿಚಯಿಸಲಾಗಿದೆ. ಇದೇ ಮಾದರಿಯಲ್ಲಿ ನಗರ ಸಾರಿಗೆಯನ್ನು ಮತ್ತಷ್ಟು ಆಧುನೀಕರಿಸಲು ಹಾರುವ ಬಸ್‌ಗಳನ್ನು ಜಾರಿಗೆ ತರಲಾಗುವುದು ಎಂದರು.
ಈ ಯೋಜನೆಯಿಂದ ಜನರು ಕಡಿಮೆ ಸಮಯದಲ್ಲಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವೇಗವಾಗಿ ಸಂಚರಿಸಲು ಸಾಧ್ಯವಾಗಲಿದೆ ಎಂದು ಘಡ್ಕರಿ ಹೇಳಿದರು.






























































































































