
ನಟ ದರ್ಶನ್ ಮನೆ ಊಟಕ್ಕೆ ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದು ಈ ಅರ್ಜಿಯನ್ನು ಇದೀಗ ಕೋರ್ಟ್ ತಳ್ಳಿ ಹಾಕಿದೆ.
ಇದೀಗ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ಬಿಡುಗಡೆಗಾಗಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕೆಯ ಮೊರೆ ಹೋಗಿದ್ದು, ದೇವಸ್ಥಾನದಲ್ಲಿ ನವ ಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದಾರೆ. ಇದರ ಪೂರ್ಣಾಹುತಿಯಲ್ಲಿ ವಿಜಯಲಕ್ಷ್ಮಿ ಭಾಗಿಯಾಗಿದ್ದು, ನರಸಿಂಹ ಅಡಿಗ ನೇತೃತ್ವದಲ್ಲಿ ನವಚಂಡಿ ಕಾ ಹೋಮ ಪಾರಾಯಣ ನಡೆದಿದೆ ಎನ್ನಲಾಗಿದೆ.











