
ಹಿರಿಯ ನಿರ್ಮಾಪಕ ಆನೇಕಲ್ ಬಾಲರಾಜ್ ಪುತ್ರ ಕನ್ನಡದ ಯುವ ನಟ ಸಂತೋಷ ಬಾಲರಾಜ್ ಅನಾರೋಗ್ಯದಿಂದ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.
34 ವರ್ಷ ವಯಸ್ಸಿನ ಸಂತೋಷ್ ಅವರು ಜಾಂಡೀಸ್ ಕಾಯಿಲೆಯಿಂದ ಬಳಲಿ ಕುಮಾರಸ್ವಾಮಿ ಲೇಔಟ್‌ನ ಸಾಗರ್ ಅಫೋಲೋ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿನಿಮಾಗಳಲ್ಲಿ ಯಶಸ್ಸು ಕಾಣಬೇಕು ಎಂದುಕೊಂಡಿದ್ದ ಸಂತೋಷ್ ಅವರು ಚಿಕ್ಕ ವಯಸ್ಸಿಗೆ ಬಾರದೂರಿಗೆ ಪಯಣ ಬೆಳೆಸಿದ್ದಾರೆ. ಸಂತೋಷ್ ಬಾಲರಾಜ್ ಅವರು ʼಕರಿಯಾ-2ʼ, ʼಕೆಂಪʼ, ʼಗಣಪʼ, ʼಬರ್ಕ್ಲಿʼ, ʼಸತ್ಯʼ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದರು.