
ಮೈಸೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ‘ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ಆದರೆ, ಸಮಯ, ಸಂದರ್ಭ ಎಲ್ಲವನ್ನೂ ನಿರ್ಧಾರ ಮಾಡುತ್ತೆ’ ಎಂದು ಹೇಳಿದರು.
ಸಿಎಂ ಆಕಾಂಕ್ಷಿ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನನ್ನನ್ನು ಯಾಕೆ ಎಳೆದು ತರ್ತಾ ಇದ್ದೀರಾ? ಈ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡೋಣ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಸಿಎಂ, ಡಿಸಿಎಂ ಎಲ್ಲರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ. ಹೈಕಮಾಂಡ್ ತೀರ್ಮಾನವೇ ಅಂತಿಮ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಲ್ಲರಿಗೂ ಸಿಎಂ ಆಗಬೇಕು ಅನ್ನೋ ಆಸೆ ಇರುತ್ತೆ. ಹಾಗೆಯೇ ನನಗೂ ಸಿಎಂ ಆಗಬೇಕೆಂಬ ಆಸೆ ಇದೆ. ಆದರೆ, ಯಾರು ಸಿಎಂ ಆಗಬೇಕು ಅಂತ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ಹೇಳಿದರು.



















