
ಬೆಂಗಳೂರು: ಸಚಿವ ಕೃಷ್ಣ ಬೈರೇಗೌಡ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಪಕ್ಷ ನನಗೆ ಮೂರು ಬಾರಿ ಸಚಿವ ಸ್ಥಾನ ನೀಡಿದೆ. ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ರೆಡಿ ಎಂದು ಹೇಳಿದ್ದಾರೆ.
ಪಕ್ಷ ನನ್ನನ್ನ ಗುರುತಿಸಿ ಸಾಕಷ್ಟು ಅವಕಾಶ ನೀಡಿದೆ. ಅರ್ಹತೆಗೂ ಮೀರಿ ಅವಕಾಶ ಸಿಕ್ಕಿದೆ. ಕ್ಷೇತ್ರ ಪುನರ್ವಿಂಗಡಣೆ ನಂತರ ಹೊಸ ಕ್ಷೇತ್ರದ ಅವಕಾಶ ನೀಡುವುದರಿಂದ ಇಲ್ಲಿಯವರೆಗೂ ಅವಕಾಶ ನೀಡಿದೆ. ಸಚಿವ ಸ್ಥಾನದಿಂದ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶದ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ, ಆದ್ರೆ ಕೆಲಸದಲ್ಲಿ ಅಲ್ಲ. ಇನ್ನೂ ಮಾಡುವ ಕೆಲಸ ಬಾಕಿ ಇದೆ, ಅವಕಾಶದ ವಿಚಾರದಲ್ಲಿ ನಾನು ಸಂತೃಪ್ತನಾಗಿದ್ದೇನೆ ಎಂದು ಹೇಳಿದರು.
ಬಿಜೆಪಿಯವರಿಗೆ ದ್ರಾಕ್ಷಿ ಗೊಂಚಲು ಹುಳಿ ಅನ್ನುವ ರೀತಿ ಆಗಿದೆ. ರಾಜಕೀಯ ಮಾತನಾಡಿ ಬೇಳೆ ಬೇಯಿಸಿಕೊಳ್ಳುತ್ತಾರೆ. ಬಿಜೆಪಿಯವರಿಗೆ ಅಧಿಕಾರ ಇಲ್ಲ, ನೀರಿನಿಂದ ಹೊರಬಿದ್ದ ಮೀನಿನಂತೆ ಒದ್ದಾಡುತ್ತಿದ್ದಾರೆ. ಅವರು ಇರೋದೆ ಸರ್ಕಾರದ ವಿರುದ್ಧ ಮಾತನಾಡಲು. ಬಿಜೆಪಿಗರಿಗೆ ಅಧಿಕಾರದ ಹಪಾಹಪಿ ಇದೆ. ಅಧಿಕಾರ ಬಿಟ್ರೆ ಬೇರೆ ಏನು ಜ್ಞಾನ ಇಲ್ಲ, ನಾವು ಜವಾಬ್ದಾರಿಯುತ ಸ್ಥಾನದಲ್ಲಿದ್ದೇವೆ, ಕೆಲಸ ಮಾಡುತ್ತಿದ್ದೇವೆ ಎಂದು ಕಿಡಿಕಾರಿದರು.



















































