32.3 C
Udupi
Tuesday, April 21, 2026
spot_img
spot_img
HomeBlogನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು; ಇದ್ದ ಸ್ವಂತ ಮನೆ ಸಾಲ ತೀರಿಸಲಾಗದೆ...

ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು; ಇದ್ದ ಸ್ವಂತ ಮನೆ ಸಾಲ ತೀರಿಸಲಾಗದೆ ಮಾರಿಬಿಟ್ಟೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ- ಜೆಡಿಎಸ್‌ ಪಾದಯಾತ್ರೆ ವಿರುದ್ಧ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬೃಹತ್ ಜನಾಂದೋಲನ ಸಮಾವೇಶ ಉದ್ದೇಶಿಸಿ ಮಾತನಾಡಿದ್ದು ನಾನು ಎರಡು ಬಾರಿ ಮುಖ್ಯಮಂತ್ರಿ, ಎರಡು ಬಾರಿ ಉಪಮುಖ್ಯಮಂತ್ರಿ, ಹಲವು ಬಾರಿ ಸಚಿವನಾಗಿದ್ದೇನೆ. ಕಳೆದ ನಾಲ್ಕು ದಶಕಗಳಿಂದ ಮುಂಚೂಣಿ ರಾಜಕಾರಣದಲ್ಲಿದ್ದೇನೆ. ಹೀಗಿದ್ದರೂ ನನಗೆ ಈಗ ಕಟ್ಟುತ್ತಿರುವ ಮನೆ ಬಿಟ್ಟು ಮೈಸೂರಿನಲ್ಲಿ ಒಂದು ನಿವೇಶನವೂ ಇಲ್ಲ ಎಂದು ಹೇಳಿದ್ದಾರೆ.

ನನಗೆ ಹಣದ ಮೋಹ ಇದ್ದಿದ್ದರೆ ಕೋಟಿ ಕೋಟಿ ಮಾಡಬಹುದಿತ್ತು. ಇಷ್ಟು ದಿನವಾದರೂ ನನಗೆ ಮೈಸೂರಲ್ಲಿ ಸ್ವಂತ ಮನೆ ಇಲ್ಲ. ಈಗಷ್ಟೇ ಕಟ್ಟಿಸುತ್ತಿದ್ದೇನೆ. ಹಿಂದೆ ಇದ್ದ ಮನೆ ಸಾಲ ತಗೊಂಡು ಕಟ್ಟಿಸಿದ್ದೆ. ಸಾಲ ತೀರಿಸಲಾಗದೆ ಆ ಮನೆಯನ್ನು ಮಾರಿಬಿಟ್ಟೆ. ಬಾಡಿಗೆ ಮನೆಯಲ್ಲಿ ಇದ್ದುಕೊಂಡೇ ವಿಧಾನಸಭೆ, ಲೋಕಸಭೆ ಚುನಾವಣೆ ಮಾಡಿದೆ. ಈಗ ಕಟ್ಟುತ್ತಿರುವ ಮನೆ ಬಿಟ್ಟು ನನ್ನ ಹೆಸರಲ್ಲಿ ಒಂದೇ ಒಂದು ಸೈಟು ಇದ್ದರೆ ತೋರಿಸಿ ಎಂದು ಸವಾಲೆಸೆದರು.

‘ಮನುವಾದಿ ಹಾಗೂ ಜಾತಿವಾದಿಗಳು ಎಂದಿಗೂ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ಹೀಗಾಗಿಯೇ ದುರುದ್ದೇಶದಿಂದ ನನ್ನ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ-ಜೆಡಿಎಸ್ ಕಪಟ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜಭವನ ಮತ್ತು ಕೇಂದ್ರ ಸರ್ಕಾರವು ಎಷ್ಟೇ ಷಡ್ಯಂತ್ರ ನಡೆಸಿದರೂ ನಾನು ಹೆದರುವುದಿಲ್ಲ. ನಾನು ಷಡ್ಯಂತ್ರಕ್ಕೆ ಬಲಿಯಾಗಿ ಮನೆಯಲ್ಲಿ ಕೂರುವವನಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page