
ವಾಷಿಂಗ್ಟನ್: ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಉತ್ತುಂಗದಲ್ಲಿರುವ ಸಮಯದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಾರ್ಯಕ್ರಮ ಒಂದರಲ್ಲಿ ಮತ್ತೊಮ್ಮೆ ಇರಾನ್ಗೆ ಬಲವಾದ ಎಚ್ಚರಿಕೆ ನೀಡಿದ್ದು ಅದೇನೆಂದರೆ ಇರಾನ್ ತನ್ನನ್ನು ಕೊಲ್ಲಲು ಪ್ರಯತ್ನಿಸಿದರೆ, ಅಮೆರಿಕ ಇರಾನ್ ಅನ್ನು ವಿಶ್ವ ಭೂಪಟದಿಂದ ಅಳಿಸಿಹಾಕುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಹೇಳಿಕೆಗೆ ಇರಾನ್ ಮಿಲಿಟರಿ ವಕ್ತಾರ ಜನರಲ್ ಅಬುಲ್ ಫಜಲ್ ಶೇಕರ್ಚಿ ಪ್ರತಿಕ್ರಿಯಿಸಿ ನಮ್ಮ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಕಡೆಗೆ ಯಾರಾದರೂ ಕೆಟ್ಟ ಉದ್ದೇಶದಿಂದ ಕೈ ಚಾಚಿದರೆ, ನಾವು ಆ ಕೈಯನ್ನು ಕತ್ತರಿಸುವುದಲ್ಲದೆ, ಅವರ ಇಡೀ ದೇಶವನ್ನೇ ಸುಟ್ಟು ಹಾಕುತ್ತೇವೆ ಎಂದು ಟ್ರಂಪ್ಗೆ ತಿಳಿದಿದೆ ಎಂದು ತಿರುಗೇಟು ನೀಡಿದ್ದಾರೆ.








