
ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ಜನರ ಆಶೀರ್ವಾದದಿಂದ ಇಲ್ಲಿಯವರೆಗೆ ಬಂದಿದ್ದೇನೆ. ನನ್ನ ಆಡಳಿತದಲ್ಲಿ ನನಗೆ ತೃಪ್ತಿ ಇದೆ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸಿಮರು.ಅವರ ಅವಧಿಯಲ್ಲಿ ಮೆಡಿಕಲ್ ಕಾಲೇಜು ಕೆಲಸವನ್ನು ಯಾಕೆ ಪೂರ್ಣಗೊಳಿಸಲಿಲ್ಲ ಎಂದು ಪ್ರಶ್ನಿಸಿದರು ಎಂದು ಹೇಳಿದ್ದಾರೆ.
ಹಾವೇರಿಗೆ ಮೆಡಿಕಲ್ ಕಾಲೇಜನ್ನು ಘೋಷಣೆ ಮಾಡಿದ್ದು ನಾನೇ, ಈಗ ಉದ್ಘಾಟನೆಯನ್ನು ಮಾಡುತ್ತಿರುವುದು ನಾನೇ. ಸುಮಾರು 500 ಕೋಟಿ ರೂ ವೆಚ್ಚದಲ್ಲಿ ಈ ಕಾಲೇಜನ್ನು ನಿರ್ಮಿಸಲಾಗಿದೆ ಎಂದು ಹೇಳಿದ ಅವರು ಪೂರ್ಣಾವಧಿ ಸಿಎಂ ಆಗಿ ಮುಂದುವರೆಯುವ ಪ್ರಶ್ನೆಗೆ ಪ್ರತಿಕ್ರಿಯಿಸಿ ‘ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ಅದಕ್ಕೆ ನಾನು ಬದ್ಧನಾಗಿರುತ್ತೇನೆ’ ಎಂದು ಹೇಳಿದರು.



















