
ಬೆಂಗಳೂರು:ಈಶ್ವರಪ್ಪ ಬಗ್ಗೆ ಮಾತನಾಡುವುದು ಬೇಡ ಅಂದುಕೊಂಡಿದ್ದೆ ಆದರೆ ಅವರು ಇತ್ತೀಚೆಗೆ ಬಿಜೆಪಿ ಮೇಲಿನ ಕಾಳಜಿಯಿಂದ ಮಾತನಾಡುತ್ತಿದ್ದಾರೆ. ವಿಜಯೇಂದ್ರ ನಾಯಕತ್ವ ಒಪ್ಪು ದಿಲ್ಲ ಎಂದು ಬಿಜೆಪಿ ಕಾರ್ಯಕರ್ತನ ರೀತಿ ಮಾತನಾಡಿರುವ ಹಿನ್ನೆಲೆ ನಾನು ಈ ಮಾತನ್ನು ಹೇಳಬೇಕಾಗಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಈಶ್ವರಪ್ಪ ಸ್ವಾರ್ಥಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ಸ್ವಾತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇತ್ತೀಚೆಗೆ ಬಿಜೆಪಿ ಮೇಲಿನ ಕಾಳಜಿ ಅವರ ಮಾತುಗಳಲ್ಲಿ ವ್ಯಕ್ತವಾಗುತ್ತಿದೆ .ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಕಾರಣ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಈಶ್ವರಪ್ಪ ರವರನ್ನು ಬಿಜೆಪಿ ಸೇರ್ಪಡೆಯ ಬಗ್ಗೆ ಯಾವುದೇ ಚರ್ಚೆಗಳು ನಡೆದಿಲ್ಲ ಈ ವಿಚಾರ ರಾಷ್ಟ್ರ ಮಟ್ಟದಲ್ಲಿ ತೀರ್ಮಾನವಾಗಲಿದೆ. ಇನ್ನು ಯತ್ನಾಳ್, ಪ್ರತಾಪ್ ಸಿಂಹ ಇತರೆ ನಾಯಕರು ಕೆ ಎಸ್ ಈಶ್ವರಪ್ಪರ ಮನೆಗೆ ಏಕೆ ಹೋಗಿದ್ದಾರೆ ಎಂದು ನನಗೆ ಮಾಹಿತಿ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.













