30.9 C
Udupi
Monday, April 13, 2026
spot_img
spot_img
HomeBlogನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ: ಭಾರತದ ಕ್ರಿಕೆಟ್ ತಂಡಕ್ಕೆ ಅಭಿನಂದನೆ ಸಲ್ಲಿಸಿದ...

ನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ: ಭಾರತದ ಕ್ರಿಕೆಟ್ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಾಂಪಿಯನ್ಸ್ ಟ್ರೋಫಿ ಐದನೇ ಪಂದ್ಯವು ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದಿದ್ದು ಭಾರತ ತಂಡ, ಪಾಕಿಸ್ತಾನವನ್ನು ಆರು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಈ ಟೂರ್ನಿಯಲ್ಲಿ ಭಾರತದ ಅಜೇಯ ಓಟ ಮುಂದುವರೆದಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಉತ್ತರವಾಗಿ ಭಾರತ 42.3 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು. ತಮ್ಮ ಏಕದಿನ ವೃತ್ತಿಜೀವನದ 51 ನೇ ಶತಕವನ್ನು ದಾಖಲಿಸಿದ ವಿರಾಟ್ ಕೊಹ್ಲಿ 111 ಎಸೆತಗಳಲ್ಲಿ 100 ರನ್ ಗಳಿಸಿ ಅಜೇಯರಾಗಿ ಗೆಲುವಿನ ರೂವಾರಿಯಾಗಿ ಹೊರಹೊಮ್ಮಿದ್ದಾರೆ.

ಟೀಂ ಇಂಡಿಯಾ ಗೆಲುವಿಗೆ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದ್ದು ಭಾರತದ ಗೆಲುವಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯಾತಿಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಅವರು ಚಾಂಪಿಯನ್ಸ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ಧ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ, ಭಾರತ ಚಾಂಪಿಯನ್ ಆಗಿ ಹೊರಹೊಮ್ಮಲಿ‌ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇನ್ನು ಡಿಕೆ ಶಿವಕುಮಾರ್ ಇದು ಇಡೀ ದೇಶವೇ ಹೆಮ್ಮೆಪಡುವ ಗೆಲುವಾಗಿದೆ. ವಿರಾಟ್ ಕೊಹ್ಲಿ ಅವರ ಶತಕದಾಟ, ಶ್ರೇಯಸ್ ಅಯ್ಯರ್ ಅವರ ಬ್ಯಾಟಿಂಗ್ ರೋಮಾಂಚಕ ಅನುಭವ ನೀಡಿತು.‌ ಜೈಹೋ ಟೀಂ ಇಂಡಿಯಾ ಎಂದು ಟ್ವೀಟ್ ಮಾಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page