
ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅಧಿಕೃತ ಎಕ್ಸ್ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಮೇ 21ರಂದು @CJP_2029 ಖಾತೆ ಸ್ಥಗಿತಗೊಂಡ ಬಳಿಕ, “Cockroach Is Back” ಹೆಸರಿನ ಹೊಸ ಖಾತೆಯನ್ನು ಆರಂಭಿಸಿದ್ದ ಸಿಜೆಪಿ, ತಮ್ಮ ಧ್ವನಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿತ್ತು.
ಸಿಜೆಪಿಯ ಚಟುವಟಿಕೆಗಳಿಗೆ ಕಾಂಗ್ರೆಸ್, ಟಿಎಂಸಿ ಸೇರಿದಂತೆ ಕೆಲವು ರಾಜಕೀಯ ಪಕ್ಷಗಳು ಬೆಂಬಲ ವ್ಯಕ್ತಪಡಿಸಿದ್ದರೆ, ಮತ್ತೊಂದೆಡೆ ವಿರೋಧದ ಧ್ವನಿಗಳೂ ಕೇಳಿಬಂದಿವೆ.
ಸಿಜೆಪಿಗೆ ನಕಲಿ ವಕೀಲರು ಹಾಗೂ ಕಾರ್ಯಕರ್ತರ ಸಂಪರ್ಕವಿದೆ ಎಂಬ ಆರೋಪಗಳ ತನಿಖೆಗೆ ನಿರ್ದೇಶನ ನೀಡುವಂತೆ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಈಗಾಗಲೇ ನಿರಾಕರಿಸಿದೆ.




























