ಫೆಸಿಫಿಕ್ ಮಹಾಸಾಗರದ ಮೇಲ್ಮೈ ಉಷ್ಣಾಂಶ ಕಡಿಮೆಯಾಗುವ ಹಿನ್ನೆಲೆ, ಈ ವರ್ಷ ನವೆಂಬರ್ ಅಂತ್ಯದಿಂದ ಡಿಸೆಂಬರ್ ವರೆಗೂ ಅಧಿಕ ಚಳಿ ಇರಲಿದೆ ಎಂದು ಹವಾಮಾನ ತಜ್ಞ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.
ಉಷ್ಣಾಂಶವು ಸಾಮಾನ್ಯ ಮಟ್ಟಕ್ಕಿಂತ ಕಡಿಮೆಯಾಗುವ ಕಾರಣ ಚಳಿಯ ಪ್ರಮಾಣ ಹೆಚ್ಚಾಗಲಿದ್ದು, ಈ ಚಳಿಯು ಜನವರಿಯಿಂದ ಮಾರ್ಚ್ ವರೆಗೂ ಮುಂದುವರೆಯುವ ಸಾಧ್ಯತೆ ಇದೆ. ಉತ್ತರ ಒಳ ನಾಡಿನ ಕೆಲ ಜಿಲ್ಲೆಗಳಲ್ಲಿ ಡಿಸೆಂಬರ್ ಹಾಗೂ ಜನವರಿಯಲ್ಲಿ 8ರಿಂದ 10 ಡಿಗ್ರಿ ಉಷ್ಣಾಂಶ ಇರಬಹುದು. ಇನ್ನು ಬೆಂಗಳೂರು ನಗರದಲ್ಲಿ ಡಿಸೆಂಬರ್ ಹಾಗೂ ಜನವರಿ ತಿಂಗಳಲ್ಲಿ 12 ರಿಂದ 14 ಡಿಗ್ರಿ ಸೆಲ್ಸಿಯಸ್ ನಷ್ಟು ಚಳಿ ದಾಖಲಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.