ಸಿಎಂ ಬದಲಾವಣೆಯ ವಿಚಾರ ಚರ್ಚೆಯಲಿಲ್ಲ, ಸಚಿವ ರಾಮಲಿಂಗ ರೆಡ್ಡಿ ಪ್ರತಿಕ್ರಿಯೆ

ರಾಜ್ಯದಲ್ಲಿ ಸಿದ್ದರಾಮಯ್ಯರವರೇ 5 ವರ್ಷ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ. ಸಿಎಂ ಬದಲಾವಣೆಯ ವಿಚಾರ ಚರ್ಚೆಯಲ್ಲಿಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.
ಡಿಕೆ ಶಿವಕುಮಾರ್ ಅವರೇ ಸಿದ್ದರಾಮಯ್ಯರವರು ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಕೂಡ ತಾವೇ ಸಿಎಂ ಆಗಿರುತ್ತೇನೆ ಎಂದಿದ್ದಾರೆ. ನವಂಬರ್ ಗೆ ಯಾವುದೇ ಕ್ರಾಂತಿ ಇಲ್ಲ. ಅದೆಲ್ಲ ಬ್ರಾಂತಿಯಷ್ಟೇ. ಇಬ್ಬರು ನಾಯಕರು ಹೇಳಿದ ಮೇಲೆ ಸಿಎಂ ಬದಲಾವಣೆಯನ್ನು ಪ್ರಶ್ನೆ ಪದೇ ಪದೇ ಕೇಳುವ ಹಾಗೆ ಇಲ್ಲ ಎಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ತಿಳಿಸಿದ್ದಾರೆ.
ಬೆಂಗಳೂರು ನಗರ ಅಭಿವೃದ್ಧಿ ಖಾತೆ ಬದಲಾವಣೆಯ ಕುರಿತು ಮಾತನಾಡಿದ, ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರಿಗೆ ಡಿಸಿಎಂ ರವರೇ ಉಸ್ತುವಾರಿ ಸಚಿವರಾಗಿದ್ದಾರೆ. ಈಗ ಬೆಂಗಳೂರು ನಗರ ಅಭಿವೃದ್ಧಿ ಖಾತೆ ಖಾಲಿ ಇಲ್ಲ. ಒಂದು ವೇಳೆ ಖಾಲಿಯಾದರೂ, ನಾನು ಕೇಳುವುದಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.



















